ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರತಿಭಟನೆ ವೇಳೆ ವ್ಯಕ್ತಿಯೋರ್ವ ಕರ್ತವ್ಯದಲ್ಲಿದ್ದ ಮಹಿಳಾ ಡಿಎಸ್ಪಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಪೊಲೀಸ್ ಅಧಿಕಾರಿಯ ಕೂದಲನ್ನು ಎಳೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಇದನ್ನು ಓದಿ : Special news : ಯಾವ ರಾಶಿಯವರು ಕಾಲಿಗೆ ಕಪ್ಪು ದಾರವನ್ನು ಕಟ್ಟಿಕೊಳ್ಳಬಾರದು ಗೊತ್ತಾ.?
ಇಂತದ್ದೊಂದು ಆಘಾತಕಾರಿ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಾಲ ಮುರುಗನ್ (30) ಬಂಧಿತ ಆರೋಪಿಯಾಗಿದ್ದು, ಪ್ರತಿಭಟನೆಗೆ ಸಂಬಂಧಿಸಿ ಇತರ ನಾಲ್ವರನ್ನು ಕೂಡ ಅರೆಸ್ಟ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?
ಕಾಳಿಕುಮಾರ್ ಎಂಬ ವ್ಯಕ್ತಿಯನ್ನು ಹಳೆಯ ದ್ವೇಷದ ಹಿನ್ನೆಲೆ ಗ್ಯಾಂಗ್ ಒಂದು ಹತ್ಯೆ ಮಾಡಿತ್ತು. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕಾಳಿಕುಮಾರ್ ಅವರ ಶವವನ್ನು ಇರಿಸಲಾಗಿದ್ದ ಅರುಪುಕ್ಕೊಟ್ಟೈನಲ್ಲಿನ ಸರ್ಕಾರಿ ಆಸ್ಪತ್ರೆಯ ಹೊರಗೆ ಕುಟುಂಬಸ್ಥರು, ಸ್ನೇಹಿತರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಕೆಲ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಲು ಮುಂದಾದಾಗ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಗಾಯತ್ರಿ ಮತ್ತು ಇತರ ಪೊಲೀಸ್ ಸಿಬ್ಬಂದಿ ಅವರನ್ನು ತಡೆಯಲು ಯತ್ನಿಸಿದರು.
ಇದನ್ನು ಓದಿ : Video : ಪ್ರೇಯಸಿಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಬಂದು ಸಿಕ್ಕಾಕೊಂಡ ಯುವಕ; ಮುಂದೆನಾಯ್ತು?
ಇದರಿಂದ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೇ ಡಿಎಸ್ಪಿ ಗಾಯತ್ರಿ ಅವರನ್ನು ಪ್ರತಿಭಟನಾಕಾರರು ತಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ವ್ಯಕ್ತಿಯೋರ್ವ ಆಕೆಯ ಕೂದಲನ್ನು ಎಳೆಯುತ್ತಿರುವುದನ್ನು ಕಾಣಬಹುದು. ಇತರ ಪೊಲೀಸರು ತಕ್ಷಣ ಡಿಎಸ್ಪಿ ಗಾಯತ್ರಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ವೈರಲ್ ವೀಡಿಯೋ ಆಧರಿಸಿ, ಡಿಎಸ್ಪಿಯ ಜುಟ್ಟು ಎಳೆದಾಡುತ್ತಿದ್ದ ಬಾಲಮುರುಗನ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದನ್ನು ಓದಿ : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನಾಂಕ.!
ಇನ್ನೂ ಹಿರಿಯ ಪೊಲೀಸ್ ಅಧಿಕಾರಿಗಳು, ಘಟನೆಯ ವೇಳೆ ಡಿಎಸ್ಪಿ ಗಾಯತ್ರಿ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಸ್ಪಷ್ಟನೆ ಯನ್ನು ನೀಡಿದ್ದಾರೆ.
VIDEO | Tamil Nadu: A women Deputy Superintendent of Police was manhandled by protesters on Tuesday while they were staging agitation demanding immediate arrest of people who were reportedly involved in the murder of a driver near Aruppukkotai in #Virudhunagar district.
DSP… pic.twitter.com/J1yGzFA6qo
— Press Trust of India (@PTI_News) September 3, 2024