Sunday, September 8, 2024
spot_img
spot_img
spot_img
spot_img
spot_img
spot_img
spot_img

Video : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಜನನಾಂಗ ತೋರಿಸಿ ವಿಕೃತಿ ಮೆರೆದ ಕಾಮುಕ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ತನ್ನ ಜನನಾಂಗವನ್ನು ತೋರಿಸಿ ವಿಕೃತಿ ಮೆರೆದ ಘಟನೆ ಕೇರಳದ ಬೇಕಲ್‍ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋದಲ್ಲಿ ವ್ಯಕ್ತಿಯು ತನ್ನ ಜನನಾಂಗ ಹಿಡಿದುಕೊಂಡು ತನ್ನ ಎದುರು ಕುಳಿತಿರುವ ಮಹಿಳೆಯನ್ನು ನೋಡುತ್ತಿದ್ದು, ಮಹಿಳೆ ಅದನ್ನು ತನ್ನ ಫೋನಿನಲ್ಲಿ ವಿಡಿಯೋ ಮಾಡಿರುವುದನ್ನು ನೋಡಬಹುದು.

ಇದನ್ನು ಓದಿ : 10/12 ನೇ ತರಗತಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ.!

ಬಸ್ಸಿನಲ್ಲಿ ಮಹಿಳೆ ತನ್ನ ಆರು ವರ್ಷದ ಮಗಳೊಂದಿಗೆ ಕಾಞಂಗಾಡ್‍ಗೆ ತೆರಳುತ್ತಿದ್ದ ವೇಳೆ ಬಸ್ಸಿನಲ್ಲಿ ಹೆಚ್ಚಿನ ಜನರು ಇರಲಿಲ್ಲ.

ಮಹಿಳೆ ಮತ್ತು ಆಕೆಯ ಮಗಳ ಎದುರಿನ ಸೀಟಿನಲ್ಲಿ ಕುಳಿತಿದ್ದ ಯುವಕ ಕಂಡಕ್ಟರ್‌ಗೆ ಆ ವ್ಯಕ್ತಿಯ ಬಗ್ಗೆ ತಿಳಿಸಲು ಪ್ರಯತ್ನಿಸಿದಾಗ ಅವನು ಬಸ್‌ನಿಂದ ಇಳಿದು ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಇನ್ನೂ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಡಿಯೋದಲ್ಲಿ ಕಂಡುಬರುವ ವ್ಯಕ್ತಿಯನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ವರದಿ ತಿಳಿಸಿದೆ.

ಇದನ್ನು ಓದಿ : ಹಳೆಯ ಹಾಡಿಗೆ 90 ವರ್ಷದ ಅಜ್ಜಿಯ ಮಸ್ತ್‌ ಮಸ್ತ್ ಸ್ಟೆಪ್ಸ್ ; ವಿಡಿಯೋ ನೋಡಿದ್ರೆ ವಾವ್ ಅನ್ನೋದು ಗ್ಯಾರಂಟಿ.!

ಈ ತರಹದ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ವಿವಿ ಪುರಂ ಕಾಲೇಜು ಬಳಿ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಭಾಗಗಳನ್ನು ತೋರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.

ಅಲ್ಲದೇ ಬಸ್​ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್​ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿತ್ತು.

ಇದನ್ನು ಓದಿ : “ಗಂಡ ಬೇಡಾ, ಪ್ರಿಯಕರ ಬೇಕು” ಎಂದ ಖುಷಿಯಿಂದ ಹನಿಮೂನ್’ಗೆ ಹೋಗಿ ಬಂದ ನವವಿವಾಹಿತೆ.!

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್​ಆರ್​ಟಿಸಿ ಬಸ್​ನಲ್ಲಿ ಘಟನೆ ನಡೆದಿದೆ. ಈ ವ್ಯಕ್ತಿಯು ಕುಟುಂಬವೊಂದರ ಜತೆ ಪ್ರಯಾಣ ಮಾಡುತ್ತಿದ್ದ ಬಾಲಕಿಯನ್ನು ಸೀಟು ಕೊಡುವ ನೆಪದಲ್ಲಿ ಹತ್ತಿರ ಕೂರಿಸಿಕೊಂಡಿದ್ದ. ಬಳಿಕ ತನ್ನ ದುರ್ಬುದ್ಧಿ ತೋರಿದ ಆತ ಬಾಲಕಿಯ ತೊಡೆ ಮೇಲೆ ಕೈಯಿಟ್ಟು ಅಸಭ್ಯವಾಗಿ ವರ್ತಿಸಿದ್ದ. ಬಳಿಕ ಆಕೆಯ ಮೈಯೆಲ್ಲ ಕೈಯಾಡಿಸಲು ಶುರುಮಾಡಿದ್ದ. ಕಿರುಕುಳದ ಕುರಿತು ಅರಿವು ಹೊಂದಿದ್ದ ಆಕೆ ತಕ್ಷಣವೇ ಪೋಷಕರಿಗೆ ಮಾಹಿತಿ ನೀಡಿದ್ದಳು ಎನ್ನಲಾಗಿದೆ.

ವಿಡಿಯೋ ಕೃಪೆ : Kasaragodchannel.com

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img