Saturday, July 13, 2024
spot_img
spot_img
spot_img
spot_img
spot_img
spot_img

ಮದುವೆಯಾಗುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ಪೀಕಿ ಕೈಕೊಟ್ಟ ಪೊಲೀಸ್ ಕಾನ್ಸ್‌ಟೇಬಲ್ ; ದೂರು ನೀಡಿದ ಯುವತಿ.!

spot_img

ಜನಸ್ಪಂದನ ನ್ಯೂಸ್‌, ಮುಂಡಗೋಡ : ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯಿಂದ 18 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಆರೋಪವೊಂದು ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಬಂದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಹಾಸನ ಮೂಲದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ 18 ಲಕ್ಷ ರುಪಾಯಿ ಹಣ ಪಡೆದ್ದಾರೆ ಎಂಬ ಆರೋಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.

ಇದನ್ನೂ ಓದಿ : ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

ಮುಂಡಗೋಡು ಠಾಣೆಯ ಕಾನ್ಸ್‌ಟೇಬಲ್ ಗಿರೀಶ್.ಎಸ್‌.ಎಮ್ ಎಂಬುವವರೇ ವಂಚನೆ ಮಾಡಿದ ಆರೋಪಿಯಾಗಿದ್ದು, ಹಾಸನ ಮೂಲದ ಚನ್ನರಾಯ ಪಟ್ಟಣ ಮೂಲದ ಸುಚಿತ್ರ ವಂಚನೆಗೊಳಗಾಗಿ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದು, ಘಟನೆ ಕುರಿತು ದೂರು ನೀಡಿದ್ದಾರೆ.

ಈ ಹಿಂದೆ ಸುಚಿತ್ರಾ ರವರು ಮದುವೆಯಾಗುವುದಾಗಿ ನಂಬಿಸಿ, 18 ಲಕ್ಷ ವಂಚಿಸಿರುವ ಕುರಿತು ಎಸ್.ಪಿ ವಿಷ್ಣುವರ್ಧನ್ ರವರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಆತನನ್ನು ಕರೆಯಿಸಿ ತನಿಖೆ ಕೈಗೊಂಡಾಗ ಹಣ ಪಡೆದಿದ್ದು ಹಣ ಮರಳಿಸುತ್ತೇನೆ ಎಂದು ಒಪ್ಪಿಕೊಂಡಿದ್ದ, ಆದರೆ ಮದುವೆಯಾಗಲು ನಿರಾಕರಿಸಿದ್ದ.

ಇದನ್ನೂ ಓದಿ : ಪುನೀತ್ ಆತ್ಮದ ಜೊತೆ ಮಾತನಾಡಿದ ಡಾ.ಶ್ರೀ ರಾಮಚಂದ್ರ ಗುರೂಜಿ ; ಮತ್ತೆ ಹುಟ್ಟಿ ಬರ್ತೀರಾ ಅಂದಿದ್ದಕ್ಕೆ ಅಪ್ಪು ಏನಂದ್ರು ಗೊತ್ತಾ?

ಬಳಿಕ ಹಣ ಮರಳಿಸದೇ ಇರುವುದರಿಂದ ನಿನ್ನೆ ರಾತ್ರಿ ಮುಂಡಗೋಡು ಠಾಣೆಗೆ ತೆರಳಿದ ಯುವತಿ ವಂಚನೆ ದೂರು ನೀಡಿದ್ದಾರೆ. ಮುಂಡಗೋಡು ಪೊಲೀಸರು ಕಲಂ 420 ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆ ಕೈಗೊಂಡಿದ್ದಾರೆ.

spot_img
spot_img
- Advertisment -spot_img