Tuesday, September 17, 2024
spot_img
spot_img
spot_img
spot_img
spot_img
spot_img
spot_img

ಭೀಕರ ರಸ್ತೆ ಅಪಘಾತ ; ಮೂವರ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬಾಗಲಕೋಟೆ : ಬಾಗಲಕೋಟೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ.

ಇದನ್ನು ಓದಿ : ದ್ವಿತೀಯ PUC ಪಾಸಾಗಿದ್ದೀರಾ.? ಗ್ರಾ. ಪಂ.ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂಬುವವರು ಅಪಘಾತದಲ್ಲಿ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರು ಮಹಿಳೆಯರು ಸ್ಕೂಟಿಯಲ್ಲಿ ಹೆಲಿಪ್ಯಾಡ್ ರಸ್ತೆಯ ಬಳಿ ರಸ್ತೆಯ ತಿರುವು ಬದಲಿಸಿಕೊಂಡು ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿವೆ.

ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟರೆ, ಯುವಕ ಮತ್ತು ಇನ್ನೋರ್ವ ಮಹಿಳೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು.

ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?

ರಜನಿ ಬೆಂಗಳೂರಿನಲ್ಲಿ ಸಾಪ್ಟವೇರ್ ಎಂಜಿನಿಯರ್ ಆಗಿದ್ದು, ರಜೆಯ ನಿಮಿತ್ಯ ಬಾಗಲಕೋಟೆಗೆ ಬಂದಿದ್ದರು. ತನ್ನ ದೂರದ ಸಂಬಂಧಿ ಶೃತಿ ಜತೆಗೆ ಹೊರಗಡೆ ಊಟ ಮಾಡಿ, ಮರಳಿ ಅವರ ಮನೆಗೆ ಹೊರಟಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಬಾಗಲಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img