Sunday, September 8, 2024
spot_img
spot_img
spot_img
spot_img
spot_img
spot_img
spot_img

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸಶಸ್ತ್ರ ಪಡೆಯ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧನೊಬ್ಬ ಶುಕ್ರವಾರ ಬೆಳಗ್ಗೆ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇದನ್ನು ಓದಿ : RPF : ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹೀಗೆ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯೋಧನನ್ನು ಜಿಯಾಲಾಲ್ ಪವಾರ್ ಎಂದು ಗುರುತಿಸಲಾಗಿದೆ.

ಗರಿಯಾಬಂದ್ ಮಹಾಸಮುಂಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಮತದಾನ ನಿನ್ನೆ ದಿ.26 ರಂದು ನಡೆಯುತ್ತಿತ್ತು. ಚುನಾವಣಾ ಕರ್ತವ್ಯಕ್ಕೆ ಭದ್ರತಾ ಸಿಬ್ಬಂದಿಯಾಗಿ ಹೆಡ್ ಕಾನ್‌ಸ್ಟೆಬಲ್ (ಯೋಧ) ಜಿಯಾಲಾಲ್ ಪವಾರನನ್ನು  ನಿಯೋಜಿಸಲಾಗಿತ್ತು.

ಇದನ್ನು ಓದಿ : Video : ಟೋಲ್ ಪ್ಲಾಜಾದಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ಕಾರು ಹತ್ತಿಸಿ ಪರಾರಿಯಾದ ಮಹಿಳೆ.!

ಹೆಡ್ ಕಾನ್‌ಸ್ಟೆಬಲ್ (ಯೋಧ) ಜಿಯಾಲಾಲ್ ಪವಾರನನ್ನು  ನಿಯೋಜಿಸಲಾಗಿತ್ತದರೂ, ಸಕ್ರೀಯ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರಲಿಲ್ಲ ಅವರು ಮೀಸಲು ತಂಡದಲ್ಲಿದ್ದರು ಎಂದು ಹೇಳಲಾಗುತ್ತಿದ್ದು, ಘಟನೆ  ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ನಡೆದಿದೆ.

ಪವಾರ್ ಅವರು ಎಂಪಿ ವಿಶೇಷ ಸಶಸ್ತ್ರ ಪಡೆಯ ಬೆಟಾಲಿಯನ್ ನಂ.34 ಗೆ ಸೇರಿದವರು. ಮಾಹಿತಿ ತಿಳಿದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು. (ಎಜೇನ್ಸಿಸ್)

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img