Tuesday, October 22, 2024
spot_img
spot_img
spot_img
spot_img
spot_img
spot_img
spot_img

ಕಾರಿನಲ್ಲಿ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದ Lady ಕಾನ್ಸ್‌ಟೇಬಲ್.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಸಿಐಡಿ ವಿಭಾಗದ ಸುಂದರ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನನ್ನು ಗುಜರಾತಿನ ಕಛ್‌ ಪೊಲೀಸರು ಅರೆಸ್ಟ್ ಮಾಡಿದ ಘಟನೆ ನಡೆದಿದೆ.

ಬಂಧಿತ ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನು ಓದಿ : 10 ಮತ್ತು 12 ನೇ ತರಗತಿ ಪಾಸ ಆದವರಿಗೆ ಯೂನಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ.!

ಅಕ್ರಮ ಮದ್ಯ ಸಾಗಾಟದಲ್ಲಿ ಬಂಧನಕ್ಕೊಳಗಾಗಿರುವ ಮಹಿಳಾ ಪೇದೆಯನ್ನು ನೀತಾ ಚೌಧರಿ ಎಂದು ವರದಿಯಿಂದ ತಿಳಿದು ಬಂದಿದೆ.

ನೀತಾ ಚೌಧರಿ ಪೂರ್ವ ಕಛ್‌ನಲ್ಲಿರೋ ಗಾಂಧಿದಾಮದ ಸಿಬಿಐ ಕ್ರೈಂ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಳು ಎಂದು ಪೊಲೀಸರು ದೃಢಪಡಿಸಿದ್ದಾರೆ.

ಗುಜರಾತಿನ ಪೊಲೀಸರಿಗೆ ಮದ್ಯ ಸಾಗಾಟದ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಚೆಕ್‌ಪೋಸ್ಟ್‌ನಲ್ಲಿ ಎಲ್ಲಾ ವಾಹನಗಳನ್ನು ತೀವ್ರ ತಪಾಸಣೆ ಮಾಡಲಾಗುತ್ತಿತ್ತು.

ಇದನ್ನು ಓದಿ : ಕರ್ನಾಟಕ ವಸತಿ ನಿಲಯಗಳಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಪೊಲೀಸರು ಭವೂಚಾ ಪ್ರದೇಶದಲ್ಲಿ ಬಿಳಿ ಬಣ್ಣದ ಥಾರ್ (ಕಾರ್) ನಿಲ್ಲಿಸುವಂತೆ ಸೂಚನೆ ನೀಡಿದರೂ ವೇಗವಾಗಿ ಚಾಲನೆ ಮಾಡಿಕೊಂಡು ಎಸ್ಕೇಪ್ ಆಗಿದ್ದನು.

ಪೊಲೀಸರು ಬಿಳಿ ಬಣ್ಣದ ಥಾರ್ ಮಾಹಿತಿಯನ್ನು ಮುಂದಿನ ಚೆಕ್‌ಪೋಸ್ಟ್‌ಗೆ ರವಾನಿಸಿದ್ದರು. ಥಾರ್ ಚಾಲಕ ಪೊಲೀಸರ ಮೇಲೆಯೇ ವಾಹನ ಹತ್ತಿಸಲು ಮುಂದಾಗಿದ್ದನು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ ಎಂದು ವರದಿ ತಿಳಿಸಿದೆ.

ಮುಂದಿನ ಚೆಕ್‌ಪೋಸ್ಟ್‌ನಲ್ಲಿ ಥಾರ್ ನಿಲ್ಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಾಹನ ಪರಿಶೀಲಿಸುತ್ತಿದ್ದ ವೇಳೆ ಪೊಲೀಸರಿಗೆ ಪೂರ್ವ ಕಚ್‌ ಸಿಬಿಐ ಘಟಕದಲ್ಲಿ ಕೆಲಸ ಮಾಡುವ ಮಹಿಳಾ ಪೇದೆ ಕಂಡಿದ್ದಾಳೆ.

ಇದನ್ನು ಓದಿ : ಎಸ್ಪಿ ಕಛೇರಿಗೆ ದೂರು ಕೊಡಲು ಬಂದ ಪತ್ನಿಯನ್ನೇ *ತ್ಯೆ ಮಾಡಿದ ಪೊಲೀಸ್ ಕಾನ್ಸ್ ಟೇಬಲ್.!

ಮಹಿಳಾ ಪೇದೆ ಜೊತೆ ಅಕ್ರಮ ಮದ್ಯ ಸಾಗಾಟಗಾರ ಯುವರಾಜ್ ಸಿಂಗ್ ಎಂಬಾತನೂ ಇದ್ದನು. ಪೊಲೀಸರು ಥಾರ್‌ನಲ್ಲಿದ್ದ ಮದ್ಯದ ಬಾಟಲ್ ಹಾಗೂ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಮಹಿಳಾ ಪೊಲೀಸ್ ಪೇದೆಯನ್ನು ಅರೆಸ್ಟ್ ಮಾಡಲಾಗಿದೆ.

ಸದ್ಯ ಪೊಲೀಸ್ ಪೇದೆ ನೀತಾ ಚೌಧರಿ ಮತ್ತು ಯುವರಾಜ್ ಸಿಂಗ್ ವಿರುದ್ಧ ಕೊಲೆ ಯತ್ನ ಹಾಗೂ ಅಕ್ರಮ ಮದ್ಯ ಸಾಗಾಟದಡಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img