Wednesday, May 22, 2024
spot_img
spot_img
spot_img
spot_img
spot_img
spot_img

Cardiac arrest : ಮತಗಟ್ಟೆಗೆ ಬಂದಿದ್ದ ಮಹಿಳೆಗೆ ಹೃದಯ ಸ್ತಂಭನ.!

spot_img

ಜನಸ್ಪಂದನ ನ್ಯೂಸ್‌,  ಬೆಂಗಳೂರು : ಜಿಲ್ಲೆಯಲ್ಲಿ ಮತದಾನ ಮಾಡಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನವಾಗಿದ್ದು, ಅದೇ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ್ದ ವೈದ್ಯರಿಂದ ಮಹಿಳೆಯ ಜೀವ ಉಳಿದಿದೆ. ಜೆ.ಪಿ. ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಘಟನೆ ನಡೆದಿದೆ.

ತಕ್ಷಣವೇ ಪರಿಶೀಲಿಸಿದ ವೈದ್ಯರಿಗೆ ಮಹಿಳೆಯ ನಾಡಿಮಿಡಿತ ಕಡಿಮೆಯಾಗಿರೋದು ಗೊತ್ತಾಗಿದೆ. ದೇಹ ಕೂಡ ಯಾವುದೇ ಪ್ರತಿಕ್ರಿಯೆಯನ್ನು ತೋರಿಸುತ್ತಿರಲಿಲ್ಲ. ತಕ್ಷಣ ಸ್ಥಳದಲ್ಲೇ CPR ಮಾಡಿದ ವೈದ್ಯರಿಂದ ಪರಿಸ್ಥಿತಿ ಸುಧಾರಿಸಿದೆ. ಚುನಾವಣಾ ಕರ್ತವ್ಯದಲ್ಲಿದ್ದವರು ಮಹಿಳೆಯ ನೆರವಿಗೆ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಐದು ನಿಮಿಷದೊಳಗೆ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ : Health : ಒಂದು ತಿಂಗಳು ಅನ್ನ ಸೇವಿಸುವುದನ್ನು ಬಿಟ್ಟರೆ ಏನಾಗುವುದು.?

ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಮತ ಹಾಕಲು ಜೆಪಿ ನಗರದ ಮತಗಟ್ಟೆ (Polling Booth) ತೆರಳಿದ್ದರು. ಸರತಿ ಸಾಲಿನಲ್ಲಿ ನಿಂತಾಗ ಸುಮಾರು 50 ವರ್ಷದ ಮಹಿಳೆ ನೀರು ಕುಡಿಯಲು ತೆರಳಿದಾಗ ಕುಸಿದು ಬಿದ್ದಿದ್ದಾರೆ. ಇದನ್ನು ನೋಡಿದ ಡಾಕ್ಟರ್ ಗಣೇಶ್ ಕೂಡಲೇ ಹೋಗಿ ಚಿಕಿತ್ಸೆ ನೀಡಿದ್ದಾರೆ.

ಹೃದಯ ಸ್ತಂಭನದಿಂದ ಕುಸಿದು ಬಿದ್ದ ಮಹಿಳೆಯ ಪ್ರಾಣವನ್ನು ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ಉಳಿಸಿದ್ದಾರೆ.

ಈ ವೇಳೆ ಅಲ್ಲಿದ್ದ ಚುನಾವಣಾಧಿಕಾರಿಗಳು ಮಹಿಳೆಗೆ ಜ್ಯೂಸ್ ವಿತರಿಸಿದರು. ಐದು ನಿಮಿಷದಲ್ಲಿಯೇ ಸ್ಥಳಕ್ಕೆ ಬಂದ ಅಂಬುಲೆನ್ಸ್​ನಲ್ಲಿ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯ್ತು.

ಇದನ್ನೂ ಓದಿ : ಮತಗಟ್ಟೆಯಲ್ಲಿ BJP ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ.!

ಮತಗಟ್ಟೆಗೆ ಬಂದಿದ್ದ ಮಹಿಳೆ ಹೃದಯ ಸ್ತಂಭನವಾಗಿದ್ದು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ನಾರಾಯಣ ಆರೋಗ್ಯ ಕೇಂದ್ರದ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ಚುನಾವಣಾ ಕರ್ತವ್ಯದಲ್ಲಿದ್ದವರು ಮಹಿಳೆಯ ಪ್ರಾಣ ಉಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.  (ಎಜೇನ್ಸಿಸ್)

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img