ಜನಸ್ಪಂದನ ನ್ಯೂಸ್, ಹಾಸನ : ಹಾಸನ ಜಿಲ್ಲೆಯಲ್ಲಿ ಟೈಯರ್ ಸ್ಫೋಟಗೊಂಡ (A tire burst) ಪರಿಣಾಮ ಪೊಲೀಸ್ ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ (Probationary IPS Officer) ಹರ್ಷವರ್ಧನ್ ಅವರು ಸಾವಿಗೀಡಾದ ಘಟನೆ ನಡೆದಿದೆ.
ಹಾಸನ ಜಿಲ್ಲೆಗೆ ಹರ್ಷವರ್ಧನ್ ಅವರು ನಿಯೋಜನೆಗೊಂಡಿದ್ದರು. ಇಂದು (ರವಿವಾರ) ಸಂಜೆ ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ (Holenarasipur to Hasan) ವರದಿ ಮಾಡಿಕೊಳ್ಳಲು ಬರುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನು ಓದಿ : ವಕ್ಫ್ ಬೋರ್ಡ್‌ನ್ನೇ ವಜಾಗೊಳಿಸಿದ Andhra Pradesh ಸರ್ಕಾರ.!
ಇನ್ನೇನು ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‌ನ ಟೈಯರ್ ಸ್ಫೋಟಗೊಂಡಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ (out of control) ಏಕಾಏಕಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು (The IPS officer suffered severe head injuries and was bleeding).
ಇದನ್ನು ಓದಿ : ಕರ್ತವ್ಯನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಆರೋಪ; ಕಾಂಗ್ರೆಸ್ ಮುಖಂಡ Arrest.!
ಅಪಘಾತ ಕಂಡ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ (He was sent to the hospital by ambulance). ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.