Thursday, April 25, 2024
spot_img
spot_img
spot_img
spot_img
spot_img
spot_img

ಮನೆ ಕೆಲಸದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ; ಪೊಲೀಸ್ ಅಧಿಕಾರಿ Arrest.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧಿಸಿರುವ ಘಟನೆ ಅಸ್ಸಾಂನ ದೇರ್ಗಾಂವ್‌ನಲ್ಲಿ ನಡೆದಿದೆ.

ಬಂಧಿತ ಅಧಿಕಾರಿಯನ್ನು ಗೋಲಘಾಟ್ ಜಿಲ್ಲೆಯ ಲಚಿತ್ ಬೊರ್ಫುಕನ್ ಪೊಲೀಸ್ ಅಕಾಡೆಮಿಯಲ್ಲಿ (LBPA) ನಿಯೋಜಿಸಲಾಗಿದ್ದ ಪೊಲೀಸರು ಉಪ ವರಿಷ್ಠಾಧಿಕಾರಿ (DSP) ಕಿರಣ್ ನಾಥ್ ಎಂದು ತಿಳಿದು ಬಂದಿದ್ದು, ಅವರನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾನುವಾರ ಸಂಜೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

Apex : ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪೊಲೀಸ್ ಅಧಿಕಾರಿ ತನ್ನ ಮೇಲೆ ಅನೇಕ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಅಲ್ಲದೇ ತನ್ನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಅಪ್ರಾಪ್ತೆ ಆರೋಪಿಸಿದ್ದಾರೆ.

ಇತ್ತೀಚೆಗೆ ಬಾಲಕಿ ಅಧಿಕಾರಿಯ ಮನೆಯಿಂದ ತಪ್ಪಿಸಿಕೊಂಡು ತಮ್ಮ ಮನೆಗೆ ಬಂದು ಇಡೀ ಘಟನೆಯನ್ನು ವಿವರಿಸಿದಳು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆನ್ನಲಾಗಿದೆ.

ಈ ಸಂಬಂಧ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 (ಲೈಂಗಿಕ ದೌರ್ಜನ್ಯ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್ 22ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ.!

ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮತ್ತು ಇತರ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  (ಎಜೇನ್ಸಿಸ್)

spot_img
spot_img
spot_img
- Advertisment -spot_img