Friday, October 18, 2024
spot_img
spot_img
spot_img
spot_img
spot_img
spot_img
spot_img

ಆರೋಪಿಗಳಿಂದ ಹಣ ಪಡೆದ ಆರೋಪ ; ತನಿಖಾಧಿಕಾರಿ Suspend.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಭೋವಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್​ಗೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಎ. ಡಿ. ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ : ಕಾಳಿಂಗ ಸರ್ಪವನ್ನು ಕೊಂದು ಮಕ್ಕಳನ್ನು ರಕ್ಷಿಸಿದ ನಾಯಿ; ವಿಡಿಯೋ Viral.!

ಭೋವಿ ನಿಗಮದಲ್ಲಿ ಕೋಟ್ಯಂತರ ಹಣ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ಮಾಡಿತ್ತು. ಈ ವೇಳೆ ಎ. ಡಿ. ನಾಗರಾಜಪ್ಪ ಹಾಗೂ ಲೀಲಾವತಿ ಸೇರಿ ಹಲವರನ್ನು ಅರೆಸ್ಟ್ ಮಾಡಲಾಗಿದೆ.

ಇನ್ನೂ ಆರೋಪಿಗಳನ್ನ ಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆ ವೇಳೆ ತನಿಖಾಧಿಕಾರಿ ನಾಗರಾಜಪ್ಪ ಅವರು ಆರೋಪಿಗಳಿಂದ ಹಣ ಪಡೆದಿರುವ ವಿಚಾರ ಬೆಳಕಿಗೆ ಬಂದಿದೆ.

ಭ್ರಷ್ಟಾಚಾರ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ. ಡಿ. ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನೂ 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ.

ಇದನ್ನು ಓದಿ : Health : ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಸ್ಪೂನ್ ತುಪ್ಪ ತಿನ್ನಬೇಕು.? ಜಾಸ್ತಿ ತಿಂದ್ರೆ ಏನಾಗುತ್ತೆ ಗೊತ್ತಾ.?

ನಿಗಮದ ಅಧೀಕ್ಷಕ ಸುಬ್ಬಪ್ಪ, ಪ್ರಕರಣ ಮುಚ್ಚಿ ಹಾಕಲು ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಅರೆಸ್ಟ್ ಮಾಡಿದ್ದರು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img