Saturday, July 27, 2024
spot_img
spot_img
spot_img
spot_img
spot_img
spot_img

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮಾಜಿ CM ವಿರುದ್ಧ FIR.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಸದಾಶಿವನಗರ (Sadashiv Nagar) ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ ಎನ್ನಲಾಗಿದೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

SSC Recruitment : ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಳೆದ ಫೆಬ್ರವರಿಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ (sexual harassment) ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಕೆಲವು ಔಷಧಿ ಪ್ಯಾಕೆಟ್‌ಗಳ ಮೇಲೆ Red ಪಟ್ಟಿ ಏಕೆ ಇರುತ್ತೇ.? ಏನಿದರ ಅರ್ಥ..!

ಈ ಕುರಿತು ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದು ಬಂದಿದೆ.

53 ಮಂದಿ ವಿರುದ್ಧ ಮಹಿಳೆ ದೂರು :

ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ ತಂದೊಡ್ಡಲಿದೆ.

spot_img
spot_img
- Advertisment -spot_img