Wednesday, May 22, 2024
spot_img
spot_img
spot_img
spot_img
spot_img
spot_img

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ; ASI ಸಾವು.!

spot_img

ಜನಸ್ಪಂದನ ನ್ಯೂಸ್, ತುಮಕೂರು : ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್‌ ಪೊಲೀಸ್‌ ಠಾಣೆಯ ಎಎಸ್‌ಐ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಎಎಸ್‌ಐ ಅವರನ್ನು ಬಿ. ವೆಂಕಟೇಶ್‌ ಎಂದು ಗುರುತಿಸಲಾಗಿದೆ. ತಾಲೂಕಿನ ಅಲಪ್ಪನಗುಡ್ಡೆ ಸಮೀಪ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಚುಂಚನಗಿರಿ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿತ್ತು.

Belagavi : ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಭೀಕರ ಹತ್ಯೆ.!

ಆದರೆ ಇಂದು ಗುರುವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ ಕರ್ತವ್ಯ ನಿಮಿತ್ತ ಬುಧವಾರ ಸಂಜೆ ಯಡಿಯೂರಿಗೆ ಹೋಗಿ ಬೈಕ್‌ನಲ್ಲಿ ಕುಣಿಗಲ್‌ಗೆ ವಾಪಸ್ ಬರುತ್ತಿದ್ದ ವೇಳೆ ರಾ. ಹೆ. 75ರ ಬಿ.ಎಂ. ರಸ್ತೆ ಆಲಪ್ಪನಗುಡ್ಡೆ ಸಮೀಪ ಯಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ವೆಂಕಟೇಶ್ ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ವೆಂಕಟೇಶ್ ಅವರ ಮೃತದೇಹವನ್ನು ಗುರುವಾರ ಮಧ್ಯಾಹ್ನ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.

Belagavi : ಸಹೋದರಿಯೊಂದಿಗೆ ಲವ್ವಿಡವ್ವಿಯಲ್ಲಿ ತೊಡಗಿದ್ದವನ ಬರ್ಬರ ಹತ್ಯೆ.!

ಈ ವೇಳೆ ಕುಣಿಗಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಪಟ್ಟಣದ ನಾಗರೀಕರು ಅಂತಿಮ ನಮನ ಸಲ್ಲಿಸಿದರು. ಬಳಿಕ ಮೃತ ದೇಹವನ್ನು ಕುಟುಂಬಸ್ಥರು ಸ್ವ ಗ್ರಾಮಕ್ಕೆ ಕೊಂಡೊಯ್ದರು.

spot_img
spot_img
spot_img
- Advertisment -spot_img