Saturday, July 27, 2024
spot_img
spot_img
spot_img
spot_img
spot_img
spot_img

ಅಂಜಲಿ ಅಂಬಿಗೇರ ಮರ್ಡರ್ ಕೇಸ್ ; DCP ಸಸ್ಪೆಂಡ್.!

spot_img

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಕಾನೂನು ಸುವ್ಯವಸ್ಥೆ‌ (Law and order) ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರಾಜೀವ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇದನ್ನು ಓದಿ : ಐಟಿಐ, ಡಿಪ್ಲೊಮ, ಬಿಇ ಮತ್ತು ಯಾವುದೇ ಪದವಿ ಪಡೆದಿದ್ದೀರಾ.? HAL ನಲ್ಲಿದೆ ಉದ್ಯೋಗವಕಾಶ.!

ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಪೇದೆಯನ್ನು ಅಮಾನತು (suspended) ಮಾಡಲಾಗಿತ್ತು.

ಇದೀಗ ಐಪಿಎಸ್ ಅಧಿಕಾರಿಯ ತಲೆದಂಡವಾಗಿದ್ದು, ಕಾನೂನು ಸುವ್ಯವಸ್ಥೆ‌ ಕಾಪಾಡುವಲ್ಲಿ ಲೋಪ ಎಸಗಿದ್ದರಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನೂ ಅಮಾನತಾಗಿದ್ದಾರೆ.

ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ (Order of State Govt) ಹೊರಡಿಸಿದೆ.

ಇದನ್ನು ಓದಿ : ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್‌ಸ್ಟೆಬಲ್.!

ಹುಬ್ಬಳ್ಳಿ‌ಗೆ ಗೃಹ ಸಚಿವರು ಭೇಟಿ ನೀಡುವ ಮುಂಚೆ ಅಮಾನತು ಆದೇಶ ಹೊರಬಿದ್ದಿದ್ದು, ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಲಿದ್ದಾರೆ.

ಇತ್ತೀಚೆಗೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದರು.

spot_img
spot_img
- Advertisment -spot_img