ಜನಸ್ಪಂದನ ನ್ಯೂಸ್, ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಇಸಿಆರ್ ದಾಖಲಿಸಲಾಗಿದೆ.
ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ.
ಇದನ್ನು ಓದಿ : LPG ಸಿಲಿಂಡರ್‌ಗೂ ಇದೆ ಎಕ್ಸ್‌ಪೈರಿ ಡೇಟ್; ಈ ರೀತಿ ತಿಳಿಯಿರಿ.!
ಲೋಕಾಯುಕ್ತ ಪೊಲೀಸರು ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ.
ಇದನ್ನು ಓದಿ : ಸಲೂನ್ನಲ್ಲಿ ತಲೆಗೆ massage ಮಾಡಿಕೊಂಡ ವ್ಯಕ್ತಿಗೆ ಲಕ್ವಾ.!
ಅಲ್ಲದೇ ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುವ ಸಾಧ್ಯತೆಯಿದೆ.