Saturday, July 27, 2024
spot_img
spot_img
spot_img
spot_img
spot_img
spot_img

76 ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ಅರ್ಜಿಗೆ ಲಿಂಕ್ ಬಿಡುಗಡೆ : ಪರಿಷ್ಕೃತ ದಿನಾಂಕ ಪ್ರಕಟ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್‌ ಸಿ ‘ಮೋಟಾರು ವಾಹನ ನಿರೀಕ್ಷಕರು’ ಹುದ್ದೆಗಳ ಭರ್ತಿಗೆ ಮಾರ್ಚ್ 14 ರಂದೇ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಹಾಗೂ ಏಪ್ರಿಲ್‌ 22 ರಿಂದ ಮೇ 21 ರವರೆಗೆ ಅರ್ಜಿ ಸ್ವೀಕಾರ ಮಾಡುವುದಾಗಿ ಹೇಳಲಾಗಿತ್ತು. 

ಆದರೆ ತಾಂತ್ರಿಕ ಕಾರಣಗಳಿಂದ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್‌ ಬಿಡುಗಡೆ ಮಾಡಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಅರ್ಜಿ ಸ್ವೀಕಾರಕ್ಕೆ ಮೇ 30 ರಿಂದ ಅರ್ಜಿ ಲಿಂಕ್‌ ಬಿಡುಗಡೆ ಮಾಡಲಾಗಿದೆ. ಹಾಗೂ ಇದಕ್ಕೆ ಸಂಬಂಧಿತ ಪರಿಷ್ಕೃತ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಬಿಡುಗಡೆ ಮಾಡಲಾಗಿದೆ.

ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ​​ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : 75 ಕೆಜಿ ವ್ಯಕ್ತಿ ತನ್ನ ಮೇಲೆ ಮಲಗಿ kiss ಕೊಡುತ್ತಿದ್ದರೆ ಎಂಜಾಯ್ ಮಾಡಕಾಗುತ್ತಾ.? ಎಂದ ನಟಿ.!

ಹುದ್ದೆ ವಿವರ : 

  • ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಲ್ಲಿ ಆರು ಹುದ್ದೆಗಳನ್ನು ಕಲ್ಯಾಣ ​- ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ವಿದ್ಯಾರ್ಹತೆ

  • ಅಭ್ಯರ್ಥಿಗಳು ಆಟೋ ಮೊಬೈಲ್​ ಮತ್ತು ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ ಬಿಟೆಕ್​ ಅಥವಾ
  • ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.

ವೇತನ

  • 33,450 – 62,600 ರೂ. ಮಾಸಿಕ.

ವಯೋಮಿತಿ : 

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ.
  • ಪ. ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ
  • ವಿಶೇಷಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಇದನ್ನು ಓದಿ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11,307+ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಶುಲ್ಕ :

  • ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
  • ಪ. ಜಾ, ಪ. ಪಂ, ಪ್ರವರ್ಗ 1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ.
  • ನಿವೃತ್ತ ಸೇವಾ ನೌಕರರಿಗೆ 50 ರೂ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ
  • ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ :

  • ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ.
  • ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : ಮೇ 2, 2024. 30-05-2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ 1, 2024. 30-06-2024.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30-06-2024.
Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img