Sunday, September 8, 2024
spot_img
spot_img
spot_img
spot_img
spot_img
spot_img
spot_img

ಅಂಚೆ ಇಲಾಖೆಯಲ್ಲಿ ಖಾಲಿ ಇರುವ 44,228 ಹುದ್ದೆಗಳಿಗೆ ಇಂದಿನಿಂದ (ದಿ.15) ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ನವದೆಹಲಿ : ಭಾರತೀಯ ಅಂಚೆ ಇಲಾಖೆ (India Post Office) ಯು ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವಿರ :

Organisation Name : India Post
Post Name : Gramin Dak Sevak (GDS), Branch Postmaster (BPM) and Assistant Branch Postmaster (ABPM)/Dak Sevak
Vacancies : 44,228
Application Mode : Online
Notification Date : 15 July
Official Website : indiapostgdsonline.gov.in

 

ಕರ್ನಾಟಕದ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಈ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ : ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ (SSLC) ತರಗತಿ ಪರೀಕ್ಷೆಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇಂಗ್ಲಿಷ್‌ ಮತ್ತು ಗಣಿತ ವಿಷಯವನ್ನು ಒಳಗೊಂಡಿರುವುದು ಕಡ್ಡಾಯ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ.

ವಯೋಮಿತಿ ಸಡಿಲಿಕೆ :

ಕೆಟಗರಿ ಸಡಿಲಿಕೆ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) : 5 ವರ್ಷಗಳು
ಇತರೆ ಹಿಂದುಳಿದ ವರ್ಗಗಳು (OBC) : 3 ವರ್ಷಗಳು
ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS) : ಯಾವುದೇ ಸಡಿಲಿಕೆ ಇರುವುದಿಲ್ಲ
ವಿಕಲಾಂಗ ವ್ಯಕ್ತಿಗಳು (PwD) : 10 ವರ್ಷಗಳು
ವಿಕಲಾಂಗ ವ್ಯಕ್ತಿಗಳು [(PwD) + OBC ] ; 13 ವರ್ಷಗಳು
ವಿಕಲಾಂಗ ವ್ಯಕ್ತಿಗಳು   [(PwD) + SC/ST ] 15 ವರ್ಷಗಳು

 

ಆಯ್ಕೆ ವಿಧಾನ : 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000 ರೂ. – 29,380 ರೂ. ಮಾಸಿಕ ವೇತನವಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/)
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನಮೂದಿಸಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಹೆಸರು ನೋಂದಣಿ ಮತ್ತು ಅರ್ಜಿ ಶುಲ್ಕ ಪಾವತಿಯಾದ ಬಳಿಕ ನೀವು ಅರ್ಜಿ ಸಲ್ಲಿಸಬಹುದು.
  • ರಚಿಸಲಾದ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂನಲ್ಲಿ ನಿಮ್ಮ ಆದ್ಯತೆಯ ನಗರ ಸೆಲೆಕ್ಟ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ನಿಮ್ಮ ಇತ್ತೀಚಿನ ಫೋಟೊ ಮತ್ತು ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಆರಂಭೀಕ ದಿನಾಂಕ : ಜುಲೈ 15, 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಗಷ್ಟ 05, 2024.

ಪ್ರಮುಖ ಲಿಂಕ್‌ :

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ : https://indiapostgdsonline.gov.in/ಕ್ಕೆ ಭೇಟಿ ನೀಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img