Monday, September 16, 2024
spot_img
spot_img
spot_img
spot_img
spot_img
spot_img
spot_img

ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 6,128 ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಬೆಂಗಳೂರು : ಇನ್ಸುಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್​ (IBPS) ನಿಂದ 6,128 ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಜುಲೈ 21, 2024 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತಾದರೂ, ಇದೀದ ಕೊನೆಯ ದಿನಾಂಕವನ್ನು ವಿಸ್ತರಿಸಿ ಜುಲೈ 28, 2024ರ ತನಕ ಅವಕಾಶ ನೀಡಲಾಗಿದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಇದನ್ನು ಓದಿ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯ 17,727 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ

ದೇಶದ ವಿವಿಧ ರಾಜ್ಯಗಳ 6,128 ಖಾಲಿ ಇರುವ ಸ್ಥಾನಗಳಿಗೆ ಅನುಸಾರವಾಗಿ ಈ ಹುದ್ದೆ ಭರ್ತಿ ನಡೆಯಲಿದ್ದು, ಕರ್ನಾಟಕದಲ್ಲಿ 457 ಪೋಸ್ಟ್‌ನ್ನು ನಿಗದಿಸಲಾಗಿದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ ಪೂರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಇದನ್ನು ಓದಿ : ಕರ್ನಾಟಕ ವಸತಿ ನಿಲಯಗಳಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಅರ್ಜಿ ಹೇಗೆ ಸಲ್ಲಿಸಬೇಕು : ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಶುಲ್ಕ : ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗಧಿ ಪಡಿಸಲಾಗಿದೆ.

  • ಪ.ಜಾ, ಪ.ಪಂ, ವಿಕಲಚೇತನ, ಇಎಸ್​ಎಂ ಅಭ್ಯರ್ಥಿಗಳು : 175 ರೂ. ಮತ್ತು
  • ಇತರೆ ಅಭ್ಯರ್ಥಿಗಳು : 850 ರೂ.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಪ್ರೀಲಿಮ್ಸ್​ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಬಳಿಕ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಇರಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭ : ಜುಲೈ 01, 2024.
  • ಅರ್ಜಿ ಸಲ್ಲಿಕೆಗೆ ಕಡೆಯ ದಿನ : ಜುಲೈ 21, 2024 ಜುಲೈ 28, 2024ರ ತನಕ ವಿಸ್ತರಿಸಲಾಗಿದೆ

ಇದನ್ನು ಓದಿ : 10 ಮತ್ತು 12 ನೇ ತರಗತಿ ಪಾಸ ಆದವರಿಗೆ ಯೂನಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ.!

ಪ್ರಮುಖ ಲಿಂಕ್‌ : ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ibps.in ಇಲ್ಲಿಗೆ ಭೇಟಿ ನೀಡಿ.

ರಾಜ್ಯದ ಯಾವ ಬ್ಯಾಂಕ್, ಎಷ್ಟು ಹುದ್ದೆ?

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು?
ಕ್ರಮಸಂಖ್ಯೆ ಬ್ಯಾಂಕ್‌ನ ಹೆಸರು ಹುದ್ದೆಗಳು
1 ಬ್ಯಾಂಕ್ ಆಫ್ ಇಂಡಿಯಾ 005
2 ಕೆನರಾ ಬ್ಯಾಂಕ್ 364
3 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 049
4 ಇಂಡಿಯನ್ ಓವರ್ಸೀಸ್ ಬ್ಯಾಂಕ್ 014
5 ಪಂಜಾಬ್ ನ್ಯಾಷನಲ್ ಬ್ಯಾಂಕ್ 015
6 ಪಂಜಾಬ್ ಆ್ಯಂಡ್ ಸಿಂಥ್ ಬ್ಯಾಂಕ್ 010
ಒಟ್ಟು 457

ಜುಲೈ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 28, 2024 ಕೊನೆ ದಿನ (IBPS).

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img