Saturday, July 13, 2024
spot_img
spot_img
spot_img
spot_img
spot_img
spot_img

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವ 1,104 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನ.!

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, SC/ST ಅಭ್ಯರ್ಥಿಗಳಿಗೆ 25 ವರ್ಷ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತ ನೀಡಲಾಗುತ್ತದೆ. ಹೆಚ್ಚುವರಿಯಾಗಿ ಸವಲತ್ತುಗಳು ಮತ್ತು ಇತರ ಪ್ರಯೋಜನಗಳು ದೊರೆಯಲಿವೆ.

ಅರ್ಜಿ ಶುಲ್ಕ :

  • ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 300 ರೂ. ಮತ್ತು
  • ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದೆ.
  • ಇದನ್ನು ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮಾಡಿ.

ಇದನ್ನೂ ಓದಿ : ಭಾರತೀಯ ಕೋಸ್ಟ್ ಗಾರ್ಡ್‌ನಲ್ಲಿ ಉದ್ಯೋಗವಕಾಶ ; ಆಯ್ಕೆಯಾದವರಿಗೆ ಮಾಸಿಕ ವೇತನ 29,200/-

ಅರ್ಜಿ ಸಲ್ಲಿಸುವ ವಿಳಾಸ : ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಅಂಚೆ ಮೂಲಕ ಜೂನ್ 30ರೊಳಗೆ ಸಲ್ಲಿಸಬೇಕಿದೆ. 

ಪ್ರಮುಖ ದಿನಾಂಕ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್‌ 30, 2024.

ಅರ್ಜಿ ಸಲ್ಲಿಸುವುದು ಹೇಗೆ.?

1) ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment ಭೇಟಿ ನೀಡಿ ಮತ್ತು ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ
2) ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
3) ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ
4) SC/ST ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ಪಾವತಿಸಿ
5) ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ತೆಗೆದುಕೊಳ್ಳಿರಿ
6) ಭರ್ತಿ ಮಾಡಿದ ಫಾರ್ಮ್ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಕಳುಹಿಸಬೇಕು.

ಇದನ್ನು ಓದಿ : Health : ಸ್ನಾನದ ನೀರಿಗೆ ಉಪ್ಪನ್ನು ಸೇರಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಮುಖಾಮುಖಿ ಸಂದರ್ಶನದ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img