Saturday, July 13, 2024
spot_img
spot_img
spot_img
spot_img
spot_img
spot_img

ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆದೇಶ ಜಾರಿಕಾರರು, ನಕಲು-ಬೆರಳಚ್ಚುಗಾರರು, ಬೆರಳಚ್ಚುಗಾರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : NFL : ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ ವೇತನ ಶ್ರೇಣಿ
ಆದೇಶ ಜಾರಿಕಾರರು 20 Rs.19950-37,900.
ನಕಲು ಬೆರಳಚ್ಚುಗಾರರು 3 Rs.21400- 42000.
ಬೆರಳಚ್ಚುಗಾರರು 3 Rs.21400- 42000.

 

ಆದೇಶ ಜಾರಿಕಾರರು ಹುದ್ದೆಗೆ ಶೈಕ್ಷಣಿಕ ಅರ್ಹತೆ :

  • ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ಬೆರಳಚ್ಚುಗಾರರು ಹುದ್ದೆಗೆ ಶೈಕ್ಷಣಿಕ ಅರ್ಹತೆ :

  • ದ್ವಿತೀಯ ಪಿಯುಸಿ ಪಾಸ್ ಅಥವಾ
  • 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ಅರ್ಹತೆ ಅಥವಾ
  • ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
  • ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ತೇರ್ಗಡೆ ಹೊಂದಿರಬೇಕು.

ಇದನ್ನು ಓದಿ : ಕಾಟನ್‌ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ವಿವಿಧ 214 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಯೋಮಾನ :

  • ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 18 ವರ್ಷ ಪೂರೈಸಿರಬೇಕು.
  • ಗರಿಷ್ಠ ವಯೋಮಿತಿ ಅರ್ಹತೆ ವರ್ಗವಾರು ಕೆಳಗಿನಂತಿದೆ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ.
  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ಲಿಂಕ್‌ ಕ್ಲಿಕ್ ಮಾಡಿ ಹುದ್ದೆವಾರು ಅಧಿಸೂಚನೆ ಓದಬಹುದು. ಹಾಗೂ ಅರ್ಜಿ ಸಲ್ಲಿಸಲು ಲಿಂಕ್‌ ಅನ್ನು ಸಹ ಪಡೆಯಬಹುದು.

ಪ್ರಮುಖ  ದಿನಾಂಕಗಳು :

  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 20-06-2024
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19-07-2024 ರ ರಾತ್ರಿ 11-59 ರವರೆಗೆ.
  • ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ : 20-07-2024 ರ ರಾತ್ರಿ 11-59 ರವರೆಗೆ.

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.300.
  • 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.150.
  • ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100.

ಇದನ್ನು ಓದಿ : Health : ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿಟ್ಟು ಸೇವಿಸ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಸೇವಾ ಪರಿವೀಕ್ಷಣಾ ಅವಧಿ : ಅಭ್ಯರ್ಥಿಯು ನೇಮಕಗೊಂಡ ಪಕ್ಷದಲ್ಲಿ ಪ್ರಾರಂಭಿಕವಾಗಿ 2 ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

ಉದ್ಯೋಗ ವಿವರ :

ಹುದ್ದೆಯ ಹೆಸರು ಬೆರಳಚ್ಚುಗಾರರು, ಆದೇಶ ಜಾರಿಕಾರರು ಹುದ್ದೆಗಳ ನೇಮಕ.
ವಿವರ/ಉದ್ದ್ಯೋಗ ಸ್ಥಳ ಉತ್ತರ ಕನ್ನಡ ಕಾರವಾರ ನ್ಯಾಯಾಲಯ ಅಧಿಸೂಚನೆ/ಕಾರವಾರ
ಪ್ರಕಟಣೆ ದಿನಾಂಕ 2024-06-19
ಕೊನೆ ದಿನಾಂಕ 2024-07-19
ಉದ್ಯೋಗ ವಿಧ ಪೂರ್ಣಾವಧಿ
ಉದ್ಯೋಗ ಕ್ಷೇತ್ರ ಕೋರ್ಟ್‌ ಹುದ್ದೆ
ವೇತನ INR 19950 to 42000 /Month

 

ಶೈಕ್ಷಣಿಕ ಅರ್ಹತೆ :

ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ/ಪಿಯುಸಿ/ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆ ಪಾಸ್.
ಕಾರ್ಯಾನುಭವ 0 Years

 

ನೇಮಕಾತಿ ಸಂಸ್ಥೆ :

ಸಂಸ್ಥೆಯ ಹೆಸರು ಉತ್ತರ ಕನ್ನಡ ಕಾರವಾರ ಸಿವಿಲ್ ನ್ಯಾಯಾಲಯ
ವೆಬ್‌ಸೈಟ್‌ ವಿಳಾಸ https://uttarakannada.dcourts.gov.in/

 

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img