Thursday, September 19, 2024
spot_img
spot_img
spot_img
spot_img
spot_img
spot_img
spot_img

ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಕೇಂದ್ರ ಕಾರ್ಮಿಕ & ಔದ್ಯೋಗಿಕ ಇಲಾಖೆಯ ಅಡಿಯಲ್ಲಿ ಬರುವ ಕಾರ್ಮಿಕ ಕಲ್ಯಾಣ ಮಂಡಳಿ, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಿರ್ದಿಷ್ಟ ಅವಧಿಗೆ ಭರ್ತಿ ಮಾಡಲು ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

ಹುದ್ದೆಗಳ ವಿವರ :

  • ಸಂಸ್ಥೆ/ಇಲಾಖೆ : ಕಾರ್ಮಿಕ ಕಲ್ಯಾಣ ಮಂಡಳಿ, ಬೆಂಗಳೂರು
  • ಹುದ್ದೆಗಳ ಹೆಸರು : ಮೆಡಿಕಲ್ ಆಫೀಸರ್
  • ಹುದ್ದೆಗಳ ಸಂಖ್ಯೆ : 18.
  • ಕೆಲಸದ ಸ್ಥಳ : ಕರ್ನಾಟಕದ ವಿವಿಧ ಜಿಲ್ಲೆಗಳು

ವೇತನ ಶ್ರೇಣಿ :

  • ಮಾಸಿಕ ರೂ. 60,000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು :

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಎಂಬಿಬಿಎಸ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ :

  • ಅರ್ಜಿ ಶುಲ್ಕವಿರುವುದಿಲ್ಲ.

ಇದನ್ನು ಓದಿ : ಅಂಚೆ ಇಲಾಖೆಯಲ್ಲಿ ಬೃಹತ್‌ ನೇಮಕಾತಿ ; 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ.!

ವಯೋಮಿತಿ :

  • ಅಭ್ಯರ್ಥಿಗಳು ಗರಿಷ್ಟ ಅಂದರೇ 70 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಆಯ್ಕೆವಿಧಾನ :

  • ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ.

 ಅರ್ಜಿ ಹಾಕುವ ವಿಧಾನ :

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎ೵ ರೂಪದಲ್ಲಿ ದಿನಾಂಕ: 25-06-2024 ರ ಒಳಗಾಗಿ wclwoblr-ka@nic.in ಇಮೇಲ್ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಇದನ್ನು ಓದಿ : ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಗ್ರೂಪ್ A & B ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.!

ಪ್ರಮುಖ ದಿನಾಂಕಗಳು :

  • ಇಮೇಲ್ ಮೂಲಕ ಅರ್ಜಿ ಕಳುಹಿಸುವ ಕೊನೆಯ ದಿನಾಂಕ :  25-06-2024. (ಇಂದೇ ಕೊನೆಯ ದಿನ)

ಪ್ರಮುಖ ಲಿಂಕುಗಳು :

ಅಧಿಸೂಚನೆ : ಇಲ್ಲಿ ಕ್ಲಿಕ್‌ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img