Friday, October 18, 2024
spot_img
spot_img
spot_img
spot_img
spot_img
spot_img
spot_img

SER : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 1,202 ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಆಗ್ನೇಯ ರೈಲ್ವೆ (South Eastern Railway) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರೈಲ್ವೆ ಇಲಾಖೆಯಲ್ಲಿ ವಿವಿಧ 1,202 ಹುದ್ದೆಗಳು ಖಾಲಿ ಇದ್ದು, ಆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನು ಓದಿ : Be alert : ಕಬ್ಬಿನ ರಸ ಮಾತ್ರವಲ್ಲ, ಹಣ್ಣಿನ ರಸವನ್ನು ಸಹ ಕುಡಿಯಬಾರದಂತೆ.!

ಹುದ್ದೆಗಳ ವಿವರ :

  1. ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಹುದ್ದೆಗಳು.
  2. ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳು.

ವಿದ್ಯಾರ್ಹತೆ :

  1. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ : ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
  2. ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ :

  • ಕನಿಷ್ಠ ವಯಸ್ಸು 18 ವರ್ಷ.
  • ಗರಿಷ್ಠ ವಯಸ್ಸು 42 ವರ್ಷ.

(ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.)

ಇದನ್ನು ಓದಿ : Special news : ರಾತ್ರಿ ವೇಳೆ ಅನ್ನ ತಿನ್ನಬೇಕೆ ಅಥವಾ ತಿನ್ನಬಾರದಾ.?

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ರೈಲ್ವೆ ಇಲಾಖೆಯು ನೀಡಿರುವುದಿಲ್ಲ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವೇತನ ಶ್ರೇಣಿ : ಆಯ್ಕೆಯಾದವರಿಗೆ 5,200 ರು. – 20,200 ರು. ಮಾಸಿಕ ವೇತನ ದೊರೆಯಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13/05/2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/062024.

ಪ್ರಮುಖ ಲಿಂಕ್‌ಗಳು :

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img