Thursday, September 19, 2024
spot_img
spot_img
spot_img
spot_img
spot_img
spot_img
spot_img

NFL : ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (National Fertilizers Limited) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ :

ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್) – 56.
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಕ್ಯಾನಿಕಲ್) – 18.
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಲೆಕ್ಟ್ರಿಕಲ್) – 21.
ಮ್ಯಾನೇಜ್‌ಮೆಂಟ್‌ ಟ್ರೈನಿ (ಇನ್ಸ್ಟ್ರುಮೆಂಟೇಶನ್) – 17.
ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್ ಲ್ಯಾಬ್) – 12.
ಮ್ಯಾನೇಜ್‌ಮೆಂಟ್‌ ಟ್ರೈನಿ (ಸಿವಿಲ್) – 03.
ಮ್ಯಾನೇಜ್‌ಮೆಂಟ್‌ ಟ್ರೈನಿ (ಫೈರ್ & ಸೇಫ್ಟಿ) – 05.
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾಹಿತಿ ತಂತ್ರಜ್ಞಾನ) – 05.
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಟೀರಿಯಲ್ಸ್) – 11.
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಚ್ಆರ್) – 16. ಒಟ್ಟು 164 ಹುದ್ದೆ 

ಇದನ್ನು ಓದಿ : BBMP : ಬಿಬಿಎಂಪಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಿದ್ಯಾರ್ಹತೆ : 

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿಇ /ಬಿ.ಟೆಕ್/ಬಿ.ಎಸ್‌ಸಿ/ಎಂಬಿಎ/ಎಂಎಸ್‌ಸಿ/ಪಿಜಿ ಡಿಪ್ಲೋಮಾ/ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ.

ವಯೋಮಿತಿ ಸಡಿಲಿಕೆ :

  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ.
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ.
  • ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ :

  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  •  ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ರೂ.
  • ಆನ್‌ಲೈನ್‌ ಮೂಲಕ ಪಾವತಿಸಬೇಕು.

ಇದನ್ನು ಓದಿ : ನೀವೂ ಹುಟ್ಟಿದ ಸಮಯವೇ ಹೇಳುತ್ತೇ ನೀವೂ ಎಂಥವರು ನಿಮ್ಮ ವ್ಯಕ್ತಿತ್ವ ಎಂಥದು ಅಂತ.!

ಆಯ್ಕೆ ವಿಧಾನ :

ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದೆ.

ಮಾಸಿಕ ವೇತನ :

ಆಯ್ಕೆಯಾದವರಿಗೆ 1 ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ 3 ವರ್ಷಗಳ ಒಪ್ಪಂದದ ಮೇರೆಗೆ ನೇಮ ಮಾಡಿಕೊಳ್ಳಲಾಗುತ್ತದೆ. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಮಾತ್ರ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 40,000 ರೂ. ಯಿಂದ 1,40,000 ರೂ. ಮಾಸಿಕ ವೇತನ ಲಭಿಸಲಿದೆ.

NFL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಬಳಿಕ ಲಾಗಿನ್‌ ಆಗಿ ಸೂಕ್ತ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನು ಓದಿ : Health : ಒಂದು ತಿಂಗಳು ಚಹಾ ಕುಡಿಯುವುದನ್ನು ಬಿಟ್ಟರೆ ಏನಾಗಬಹುದು ಗೊತ್ತೆ.?

ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ :

  • ಕಟ್-ಆಫ್ ದಿನಾಂಕ : 31/05/2024.
  • ಆನ್‌ಲೈನ್ ಅಪ್ಲಿಕೇಶನ್ ತೆರೆಯುವ ದಿನಾಂಕ : 12/06/2024.
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 02/07/2024.
  •  ಸಂಪಾದನೆ/ತಿದ್ದುಪಡಿ ವಿಂಡೋವನ್ನು ತೆರೆಯುವ ದಿನಾಂಕ : 04/07/2024.
  • ಸಂಪಾದನೆ/ತಿದ್ದುಪಡಿ ವಿಂಡೋವನ್ನು ಮುಚ್ಚುವ ದಿನಾಂಕ : 05/07/2024.
  • ಕೊನೆಯ ಕ್ಷಣದ ವಿಪರೀತವನ್ನು ತಪ್ಪಿಸಲು ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಯನ್ನು ಸಮಯಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img