Friday, October 18, 2024
spot_img
spot_img
spot_img
spot_img
spot_img
spot_img
spot_img

ರೂ.15 ಸಾವಿರ ವಿದ್ಯಾರ್ಥಿ ವೇತನಕ್ಕಾಗಿ ಇಂದೇ ಅರ್ಜಿ ಸಲ್ಲಿಸಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯನ್ನು ಕರ್ನಾಟಕ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ವಿದ್ಯಾಸಿರಿ ವಿದ್ಯಾರ್ಥಿ ವೇತನ :

ವಿದ್ಯುನ್ಮಾನ ಪಾವತಿ ಮತ್ತು ವಿದ್ಯಾರ್ಥಿ ವೇತನದ ಅರ್ಜಿ ವ್ಯವಸ್ಥೆಯ ಮೂಲಕ ಕರ್ನಾಟಕ ಸರ್ಕಾರವು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಇದು ತಮ್ಮ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಪಡೆಯಲು ಸಹಾಯ ಮಾಡುವುದಲ್ಲದೆ. ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ವಸತಿ ಪ್ರತಿಭಾ ಪುರಸ್ಕಾರ ಹೀಗೆ ಕೆಲವೊಂದು ರಿಯಾಯಿತಿಗಳನ್ನು ಕೆಲವೊಂದು ಕೋರ್ಸ್ ಗಳಿಗೆ ಈ ವಿದ್ಯಾರ್ಥಿ ವೇತನದ ಮೂಲಕ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ಪ್ರಾರಂಭಿಸಲಾಗಿದೆ.

ಇದನ್ನು ಓದಿ : Kalaburagi : ಹಾಡುಹಗಲೇ ಮಹಿಳೆಯರಿಬ್ಬರ ಬ*ರ್ಬ*ರ ಹ*ತ್ಯೆ.!

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅಧಿಕೃತ ಲಿಂಕ್ :

ವಿದ್ಯಾಶ್ರೀ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರವು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಈ ವಿದ್ಯಾರ್ಥಿ ವೇತನವನ್ನು ಪಡೆದು ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಬಹುದಾಗಿದೆ. ಅಲ್ಲದೆ ಈ ವಿದ್ಯಾರ್ಥಿ ವೇತನದಿಂದ ಸಾಕ್ಷರತೆಯ ಪ್ರಮಾಣವನ್ನು ಕೂಡ ಸುಧಾರಿಸಲು ಜೊತೆಗೆ ಉದ್ಯೋಗವು ಕೂಡ ಈ ವಿದ್ಯಾರ್ಥಿ ವೇತನದ ಮೂಲಕ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ. 1,500/- ರಂತೆ, ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು (ಜೂನ್-2023 ರಿಂದ ಮಾರ್ಚ್-2024 ರವರೆಗೆ) ಅವರ ಬ್ಯಾಂಕ್ ಖಾತೆಗೆ, ಆನ್‌ಲೈನ್ ಮೂಲಕ ಜಮಾ (Bank Account)ಮಾಡಲಾಗುತ್ತದೆ.

“ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್‌ಸೈಟ್” https://ssp.postmatric.karnataka.gov.in/

ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :

ಕರ್ನಾಟಕ ಸರ್ಕಾರವು ಪ್ರಾರಂಭಿಸಿರುವ ಈ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ಕೆಳಕಂಡ ದಾಖಲೆ ಅಗತ್ಯ.

  • ವಿದ್ಯಾರ್ಥಿಗಳು ಮೊಬೈಲ್ ನಂಬರ್/Students mobile no.
  • ಇಮೇಲ್ ಐಡಿ/Email Id.
  • ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ/SSLC Registration No.
  • ಆಧಾರ್ ಕಾರ್ಡ್/Aadhaar card.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and Income Certificate.
  • ವಿದ್ಯಾರ್ಥಿಯ ವಿಳಾಸ ಹಾಸ್ಟೆಲ್ ವಿವರ/Student Address Hostel Details.
  • ಕಾಲೇಜಿನ ನೋಂದಣಿ ಸಂಖ್ಯೆ/College Roll No.

ಇದನ್ನು ಓದಿ : ಬಿಳಿ ಬಣ್ಣದ ತುಂಡುಡುಗೆಯಲ್ಲಿ Hot ಆಗಿ ಕಾಣಿಸಿಕೊಂಡ ಜಾಕ್ವೆಲಿನ್ ; Video Viral.!

ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದ್ದು, ಈ ವಿದ್ಯಾರ್ಥಿ ವೇತನದ ಮೂಲಕ ಸುಮಾರು 15 ಸಾವಿರ ರೂಪಾಯಿಗಳ ಸ್ಕಾಲರ್ಶಿಪ್‌ನ್ನು ಪಡೆಯಬಹುದಾಗಿದೆ.

ವಿದ್ಯಾ ವೇತನದ ಮೊತ್ತ :

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img