ಜನಸ್ಪಂದನ ನ್ಯೂಸ್, ಡೆಸ್ಕ್ : ಈಗಂತೂ ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಇವೆ. ಹಿಂದೆ ಊಟ, ಬಟ್ಟೆ ಮತ್ತು ಮನೆ ಪ್ರಮುಖ ಮೂಲಭೂತ ಅವಶ್ಯಕತೆಗಳಾಗಿದ್ದವು (Basic requirements). ಆದರೆ ಇಂದು ಮೊಬೈಲ್ ಕೂಡ ಈ List ಗೆ ಸೇರ್ಪಡೆಯಾಗಿದೆ
ಮೊಬೈಲ್ ಬಳಕೆ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅದನ್ನು ಹೆಚ್ಚು ಬಳಸುವುದು ಅಷ್ಟೊಂದು ಒಳ್ಳೆಯದಲ್ಲ. ರಸ್ತೆಗಳಲ್ಲಿ ಹೋಗುವಾಗ ತುಂಬಾ ಜಾಗೃತಿ ವಹಿಸಬೇಕು.
ಇದನ್ನು ಓದಿ : ವಿದ್ಯಾರ್ಥಿನಿಯರಿಗೆ sexually- harasses ನೀಡಿದ ಅತಿಥಿ ಉಪನ್ಯಾಸಕನಿಗೆ ಥಳಿತ.!
ಆದರೆ ಕೆಲವರು ಹಾಗಲ್ಲ, ಅವರಿಗೆ ಎಲ್ಲಿದ್ದೀವಿ, ಏನು ಮಾಡ್ತಿದ್ದೀವಿ ಎಂಬುದನ್ನು ಮರೆತು ಮೊಬೈಲ್ ನಲ್ಲಿ ಮಾತನಾಡುತ್ತಾ, ಚಾಟ್ ಮಾಡುತ್ತಾ ಹೋಗುತ್ತಾರೆ.
ಇಲ್ಲೊಬ್ಬ ಮಹಿಳೆ ಫೋನಲ್ಲಿ ಮಾತನಾಡುತ್ತಾ ಮಾತನಾಡುತ್ತಾ ಮೈಮರೆತು ಸೀದಾ ಹೋಗಿ ಚರಂಡಿ ಗುಂಡಿಗೆ ಬಿದ್ದಿದ್ದಾರೆ (He fell into the drain). ಮಗುವನ್ನು ಕಂಕುಳಲ್ಲಿ ಎತ್ತಿಕೊಂಡಿದ್ದ ಮಹಿಳೆ ಫೋನಲ್ಲಿ ಮಾತಾಡ್ತಾ ಬರ್ತಿದ್ದ ವೇಳೆ ಆಯತಪ್ಪಿ ತೆರೆದ ಚರಂಡಿಯೊಳಗೆ ಮಗುವಿನ ಸಮೇತ ಬಿದ್ದಿದ್ದಾರೆ.
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಆಘಾತಕಾರಿ ದೃಶ್ಯವನ್ನು ಕಂಡು ನೆಟ್ಟಿಗರು ಅಯ್ಯೋ, ಪಾಪ ಅಂತಿದ್ದಾರೆ. 2021 ರಲ್ಲಿ ಫರಿದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಇದೀಗ ಮತ್ತೊಮ್ಮೆ ವೈರಲ್ ಆಗುತ್ತಿದೆ.
ರಸ್ತೆ ಪಕ್ಕ ಇದ್ದ ತೆರೆದ ಚರಂಡಿ ಗುಂಡಿಯನ್ನು ಗಮನಿಸದೇ ಮಹಿಳೆಯೊಬ್ಬರು ಮಗುವಿನ ಸಮೇತ ಆ ಗುಂಡಿಗೆ ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಸ್ಥಳೀಯರು ಮಗು ಮತ್ತು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ಇದನ್ನು ಓದಿ : 3ನೇ ಮಹಡಿಯಿಂದ ಹಾರಿದ PU ಮೊದಲನೇ ವರ್ಷದ ವಿದ್ಯಾರ್ಥಿ : ದೃಶ್ಯ CCTV ಯಲ್ಲಿ ಸೆರೆ.!
ಇನ್‌ಸ್ಟಾಗ್ರಾಮ್ ಖಾತೆ rafikalloor1shams ಹೆಸರಿನಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ.
ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 4.2 ಮಿಲಿಯನ್ ವ್ಯೂಸ್ ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.
ಇದನ್ನು ಓದಿ : ಅಪಾರ್ಟ್‌ಮೆಂಟ್‌ನ ಮಹಡಿ ಮೇಲೆ Car ಪಾರ್ಕ್ ಮಾಡತ್ತಿರಾ.? ಹಾಗಾದ್ರೆ ಈ ವಿಡಿಯೋ ನೋಡಿ.!
ಫೋನ್ ಬದಲು ಸರಿಯಾಗಿ ರೋಡ್ ನೋಡ್ಕೊಂಡು ನಡೆದುಕೊಂಡು ಹೋಗ್ಬೇಕು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಆ ಹೆಂಗಸಿನ ತಪ್ಪೇನಿಲ್ಲ, ಚರಂಡಿ ಗುಂಡಿಯನ್ನು ಸರಿಯಾಗಿ ಮುಚ್ಚಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ :
A woman holding her nine-month-old baby plunged into an uncovered manhole while distracted by her mobile phone. Luckily no one was injured and both were quickly rescued by bystanders in the dramatic accident in Faridabad, India. #mother #mum #baby #child #children #terrifying… pic.twitter.com/JHXZq2uY1G
— 🔴 Wars and news 🛰️ (@EUFreeCitizen) January 23, 2025
ಹಿಂದಿನ ಸುದ್ದಿ : ವಿಚ್ಛೇದನದ ಕೇಸ್ ನಲ್ಲಿ ಪುರುಷರು ಸಹ ಸಂತ್ರಸ್ತರು : ಹೈಕೋರ್ಟ್.
ಜನಸ್ಪಂದನ ನ್ಯೂಸ್, ಬೆಂಗಳೂರು : ಇತ್ತೀಚೆಗೆ ವೈವಾಹಿಕ ವಿವಾದಗಳ ಪ್ರಕರಣಗಳಲ್ಲಿ (A case of matrimonial disputes) ಮಹಿಳೆಯರು ಹೆಚ್ಚಾಗಿ ಬಲಿಪಶುಗಳಾಗಿದ್ದರೂ, ಅಂತಹ ಪ್ರಕರಣಗಳಲ್ಲಿ ಪುರುಷರು ಸಹ ಸಂತ್ರಸ್ತರು. ಹೀಗಾಗಿ ಲಿಂಗ ಸಮಾನತೆಯ ಸಮಾಜ ಈಗಿನ ಅಗತ್ಯವಾಗಿದೆ (A gender egalitarian society is the need of the hour) ಎಂದು ಕರ್ನಾಟಕ High court ಅಭಿಪ್ರಾಯಪಟ್ಟಿದೆ.
ಇದನ್ನು ಓದಿ : WCD : ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರು ಹೊರಡಿಸಿದ ಆದೇಶದಲ್ಲಿ ಈ ಬಗ್ಗೆ ತಿಳಿಸಲಾಗಿದೆ.
ಮಹಿಳೆಯೊಬ್ಬರು ತಮ್ಮ Divorce ಕುರಿತು ತಾವು ಹಾಜರಾಗಬೇಕಿರುವ ಕೋರ್ಟ್ ತಮ್ಮ ಮನೆಯಿಂದ 130 ಕಿಲೋಮೀಟರ್ ದೂರದಲ್ಲಿದೆ.
ಇದನ್ನು ಓದಿ : ರಸ್ತೆಯಲ್ಲಿ ಮಲಗಿದ್ದ ನಾಯಿಮರಿಯ ಮೇಲೆ ಕಾರು ಹತ್ತಿಸಿದ ಕ್ರೂರ ನಿವೃತ್ತ Police ಸಿಬ್ಬಂದಿ.!
ಹೀಗಾಗಿ ಪ್ರತಿ ಸಲವೂ ವಿಚಾರಣೆಗೆ ಹಾಜರಾಗಲು ಕಷ್ಟವಾಗುತ್ತಿದೆ ಎಂದು ವರ್ಗಾವಣೆ ಅರ್ಜಿಯನ್ನು (Transfer application) ಸಲ್ಲಿಸಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ (Dismissed).
ಮಹಿಳೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ಪ್ರಕರಣದಲ್ಲಿ ಪ್ರತಿವಾದಿ ಆಕೆಯ ಪತಿ ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಈ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಿದರೆ, ಪತಿಗೆ ಇನ್ನಷ್ಟು ತೊಂದರೆಯಾಗುತ್ತೆ ಎಂದು ವಾದಿಸಿದ್ದು, ಇದನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿದೆ.
ಇದನ್ನು ಓದಿ : Video : ತೀವ್ರ ಅಸ್ವಸ್ಥಗೊಂಡ ತನ್ನ ಮರಿಯನ್ನು ಬಾಯಿಯಲ್ಲಿ ಆಸ್ಪತ್ರೆಗೆ ತಂದ ತಾಯಿ ನಾಯಿ.!
ಮಹಿಳೆಗೆ ಪುರುಷನಂತೆಯೇ ಸಮಾನ ಹಕ್ಕುಗಳಿವೆ. ವಾಸ್ತವವಾಗಿ, ಹೆಚ್ಚಿನ ಸಂದರ್ಭಗಳಲ್ಲಿ ಮಹಿಳೆಯರು ಪ್ರಾಥಮಿಕ ಬಲಿಪಶುಗಳು. ಆದರೆ ಪುರುಷರು ಸ್ತ್ರೀಯರ ಕ್ರೌರ್ಯದಿಂದ ಪ್ರಭಾವಿತರಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಆದ್ದರಿಂದ, ಲಿಂಗ ಸಮಾನ ಸಮಾಜದ ಅವಶ್ಯಕತೆ ಇದೆ. ಆ ರೀತಿಯ ಸಮಾಜ ಲಿಂಗ ಅಥವಾ ಲಿಂಗದ ಆಧಾರದ ಮೇಲೆ ಕರ್ತವ್ಯಗಳನ್ನು ಬೇರ್ಪಡಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಹೈಕೋರ್ಟ್ ತಿಳಿಸಿದೆ.