Saturday, January 18, 2025
HomeBelagavi News150 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ ; Chikkodi ಮೂಲದ ಯೋಧ...
spot_img

150 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ ; Chikkodi ಮೂಲದ ಯೋಧ ಸೇರಿ ಐವರು ಹುತಾತ್ಮ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ (Kuppanawadi of Chikkodi Taluk) ಗ್ರಾಮದ ಯೋಧರೊಬ್ಬರು (Soldier) ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾದ ಪರಿಣಾಮ ಚಿಕ್ಕೋಡಿಯ ಯೋಧ ಸುಭಾಷ ಖೋತ ಸೇರಿ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ (Martyrdom).

Read it : Health : ಚಳಿಗಾಲದಲ್ಲಿ ನೆನಸಿದ ಒಂದು ಹಿಡಿ ಶೇಂಗಾ ತಿಂದ್ರೆ ಏನಾಗುತ್ತೆ.?

ಸೇನಾ ವಾಹನವೊಂದು (military van) ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಬಳಿ ದಾರಿ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.

Poonchi Military vehicle overturnedಮಾಹಿತಿ ತಿಳಿದ ತಕ್ಷಣ ಸೇನಾಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ವೇಳೆ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಈ ಘೋರ ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಸಹ ಹುತಾತ್ಮರಾಗಿದ್ದಾರೆ.

Read it : ಮೋಸ ಮಾಡಿ ಮದುವೆಯಾಗಲು ರೆಡಿಯಾಗ್ತಿದ್ದ Lover; ಮರ್ಮಾಂಗವನ್ನೇ ಕಟ್ ಮಾಡಿದ ಪ್ರೇಯಸಿ.!

ರಕ್ಷಣಾ ಸಿಬ್ಬಂದಿ ಐವರು ಮೃತ ಯೋಧರ ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ ವಾಹನದಲ್ಲಿ ಹತ್ತು ಸೈನಿಕರಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಾರು 100-150 ಅಡಿ ಆಳದ ಕಂದಕಕ್ಕೆ ಸೇನಾ ವಾಹನವು ಬಿದ್ದಿದೆ ಎನ್ನಲಾಗಿದ್ದು, ಮಾಹಿತಿ ತಿಳಿದ ಕೂಡಲೇ 11 ಎಂಎಲ್‌ಐನ ಕ್ವಿಕ್ ರೆಸ್ಪಾನ್ಸ್ ಟೀಮ್ (QRT) ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!