ಜನಸ್ಪಂದನ ನ್ಯೂಸ್, ಬೆಂಗಳೂರು : ಶಾಸಕ ಮುನಿರತ್ನ ವಿರುದ್ದ ಜೀವ ಬೆದರಿಕೆ ಮತ್ತು ಜಾತಿನಿಂದನೆ ಆರೋದಡಿ ಕೇಸ್ ದಾಖಲಾದ ಹಿನ್ನೆಲೆ ಅವರನ್ನು ಅರೆಸ್ಟ್ ಮಾಡಲಾಗಿದೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಮತ್ತು ಮುನಿರತ್ನ ನಡುವಿನ ಮಾತುಕತೆಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ.
ಇದನ್ನು ಓದಿ : PUC, ಪದವಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!
ಶಾಸಕ ಮುನಿರತ್ನ ಅವರು ಎರಡು ಸಮುದಾಯಗಳ ನಿಂದನೆ ಮಾಡಿದ ಆರೋಪ ಎದುರಿಸುತ್ತಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.
ತಮ್ಮ ವಿರುದ್ದ ಎರಡು ಎಫ್‌ಐಆರ್ ದಾಖಲಾಗುತ್ತಿದ್ದಂತೆ ಮುನಿರತ್ನ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ. ಶಾಸಕರು ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಪೊಲೀಸರು ಅವರಿಗಾಗಿ ಹುಡುಕಾಟ ಆರಂಭಿಸಿದ್ದರು. ಇದೀಗ ಅವರನ್ನು ಕೋಲಾರದಲ್ಲಿ ಅರೆಸ್ಟ್ ಮಾಡಲಾಗಿದೆ.
ಇದನ್ನು ಓದಿ : Strange tradition : ಭಾರತದ ಈ ಸಂತೆಯಲ್ಲಿ ಹುಡುಗಿಯರು ಮತ್ತು ಮಹಿಳೆಯರ ಮಾರಾಟ.!
ಮುನ್ನೆಚ್ಚರಿಕೆ ಕ್ರಮವಾಗಿ ಮುನಿರತ್ನ ಮನೆ ಬಳಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ.
ಬೆಂಗಳೂರು ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.