Thursday, September 19, 2024
spot_img
spot_img
spot_img
spot_img
spot_img
spot_img
spot_img

ಅನಧಿಕೃತವಾಗಿ ಲವ್ವರ್ಸ್ ಗೆ ಕಾಲ್ ಡಿಟೆಲ್ಸ್ ಕೊಡುತ್ತಿದ್ದ ಪೊಲೀಸ್ Arrest.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ಸಿಸಿಬಿ‌ ಪೊಲೀಸರು, ಪ್ರೈವೇಟ್ ಡಿಟೆಕ್ಟಿವ್‌ ಏಜೆನ್ಸಿಗಳಿಗೆ ಅನಧಿಕೃತವಾಗಿ CDR (Call detail records) ಗಳನ್ನು ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿ ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಎಂದು ತಿಳಿದು ಬಂದಿದೆ .

ಇದನ್ನು ಓದಿ : Health : ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು.!

ಆರೋಪಿ ಮುನಿರತ್ನ ಹಲವು ವರ್ಷಗಳಿಂದ ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಕೇಸ್ ಸಂಬಂಧ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಸಿಡಿಆರ್ ಪಡೆಯಲು ಸರ್ವಿಸ್ ಪ್ರೈವೇಟ್ ಗಳಿಗೆ ನೀಡುವ ಪತ್ರದಲ್ಲಿ ತನಗೆ ಬೇಕಾದ ಫೋನ್ ನಂಬರ್ ಗಳನ್ನ ಸೇರಿಸಿ ಸಿಡಿಆರ್ ಪಡೆಯುತ್ತಿದ್ದ ಎನ್ನಲಾಗಿದೆ.

ಇದನ್ನು ಓದಿ : ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ : ಕೊನೆಯ ದಿನಾಂಕ ಯಾವತ್ತು.? ಡೈರೆಕ್ಟ್ link ಇಲ್ಲಿದೆ.

ಸಿಡಿಆರ್ ಬಂದ ನಂತರ ಅಧಿಕೃತವಾದ ಸಿಡಿಆರ್ ಗಳನ್ನ ಅಧಿಕಾರಿಗಳಿಗೆ ನೀಡಿ ಅನಧಿಕೃತ ಸಿಡಿಆರ್ ಗಳನ್ನು ನಾಗೇಶ್ವರ ರೆಡ್ಡಿ ಎಂಬಾತನಿಗೆ ನೀಡುತ್ತಿರುವುದು ಸಿಸಿಬಿ ತನಿಖೆ ವೇಳೆ ಬಹಿರಂಗವಾಗಿದೆ.

ಹೆಚ್ಚಾಗಿ ಗಂಡ ಅಥವಾ ಹೆಂಡತಿ‌ ಮತ್ತು ಪ್ರೇಮಿಗಳು ಸಂಬಂಧದಲ್ಲಿ ಅನುಮಾನ ಮೂಡಿ ತಮ್ಮ ಪ್ರೀತಿ ಪಾತ್ರರ ಯಾರ ಸಂಪರ್ಕದಲ್ಲಿದ್ದಾರೆ ಅನ್ನೋದನ್ನ ತಿಳಿದುಕೊಳ್ಳಲು ಈ ಕಾಲ್ ಡಿಟೆಲ್ಸ್ ನ ಅನಧಿಕೃತವಾಗಿ ಪಡೆದುಕೊಳ್ಳುತ್ತಿದ್ರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : ನಿಮ್ಮ ಹೃದಯ ರೇಖೆಯಿಂದ ತಿಳಿಯಬಹುದು ನಿಮ್ಮ personality ; ನಿಮ್ಮ ಅಂಗೈ ರೇಖೆ ಯಾವ ರೀತಿ ಇದೆ.!

ಅಷ್ಟೇ ಅಲ್ಲದೆ ಬ್ಯುಸಿನೆಸ್ ಮೆನ್ ಗಳ ಕೆಲ ರಾಜಕೀಯ ವ್ಯಕ್ತಿಗಳು ತಮ್ಮ ಎದುರಾಳಿಗಳ ಸಿಡಿಆರ್ ಪಡೆದಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ಪತ್ನಿಯರು ತಮ್ಮ ಪತಿಯ ಕಾಲ್ ಡಿಟೆಲ್ಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img