ಜನಸ್ಪಂದನ ನ್ಯೂಸ್, ಡೆಸ್ಕ್ : ನ್ಯಾಯಾಲಯವು ಹೊಸ ಆದೇಶವನ್ನು ಹೊರಡಿಸಿದ್ದು, ಪತ್ನಿಯಾಗಲಿ ಅಥವಾ ಪತಿಯಾಗಲಿ ತನ್ನ ಜೀವನ ಸಂಗಾತಿಯಿಂದ ಅಂತರ ಕಾಯ್ದುಕೊಂಡು, ಪ್ರತ್ಯೇಕ ಕೋಣೆಯಲ್ಲಿ ವಾಸಿಸುವಂತೆ ಒತ್ತಾಯಿಸುವುದು ಕ್ರೌರ್ಯ ಎಂದು ತಿಳಿಸಿದೆ.
ಇದನ್ನು ಓದಿ : ನಾಗರ ಹಾವನ್ನು ಪ್ರೀತಿಯಿಂದ ಮುದ್ದಿಸಲು ಬಂದ ಎಮ್ಮೆ ; ಮುಂದೆನಾಯ್ತು.? ಈ ವಿಡಿಯೋ ನೋಡಿ.!
ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13 ರ ಅನ್ವಯ ಪತಿ -ಪತ್ನಿ ನಡುವಿನ ಸಂಬಂಧ ಮತ್ತು ಜೀವನ ವಿಧಾನದ ಬಗ್ಗೆ ಪ್ರಕರಣ ಒಂದರಲ್ಲಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಈ ಆದೇಶ ಹೊರಡಿಸಿದೆ.
ಪ್ರಸ್ತುತ ಪ್ರಕರಣದಲ್ಲಿ ಪತ್ನಿ ಪತಿಯಿಂದ ಅಂತರ ಕಾಯ್ದುಕೊಂಡು ಬೇರೆ ಕೋಣೆಯಲ್ಲಿ ವಾಸವಿದ್ದರು. ಹೀಗಾಗಿ ಇದನ್ನೇ ಆಧಾರವಾಗಿಟ್ಟುಕೊಂಡು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13 ರ ಅಡಿಯಲ್ಲಿ ವಿಚ್ಛೇದನಕ್ಕೆ ಅನುಮತಿ ನೀಡಬಹುದು ಎಂದು ಕೋರ್ಟ್ ಹೇಳಿದೆ.
ವೈವಾಹಿಕ ಸಂಬಂಧದ ಅವಿಭಾಜ್ಯ ಅಂಗವೇ ಸಹಬಾಳ್ವೆ. ಪ್ರತ್ಯೇಕ ಕೋಣೆಯಲ್ಲಿ ವಾಸಿಸಲು ಮುಂದಾದರೆ, ಪತಿಯೊಂದಿಗೆ ಸಹಬಾಳ್ವೆ ನಡೆಸಲು ಹೆಂಡತಿ ನಿರಾಕರಿಸಿದರೆ, ಅವಳು ಅವನ ವೈವಾಹಿಕ ಹಕ್ಕುಗಳನ್ನು ಕಸಿದುಕೊಳ್ಳುತ್ತಾಳೆ.
ಇದನ್ನು ಓದಿ : Job : 10ನೇ ತರಗತಿ ಆಗಿದ್ರೆ ಸಾಕು ; ಟಾಟಾ ಸಮೂಹದಿಂದ 4,000 ಮಹಿಳೆಯರಿಗೆ ಉದ್ಯೋಗಾವಕಾಶ.!
ಹೀಗಾಗಿ ಇದು ದೈಹಿಕ ಮತ್ತು ಮಾನಸಿಕ ಕ್ರೌರ್ಯ ಎರಡಕ್ಕೂ ಕಾರಣವಾಗುತ್ತದೆ. ಅದು ಅವನ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಕೋರ್ಟ್ ಮಾಹಿತಿ ನೀಡಿದೆ.