ಜನಸ್ಪಂದನ ನ್ಯೂಸ್, ನೌಕರಿ : ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ ನಡೆಯಲಿದ್ದು, ಈ ಕುರಿತು ಅಧಿಕೃತ ಅಧಿಸೂಚನೆ ಹೊರಬಿದ್ದಿದೆ.
ಈ ಮೊದಲು 168 ಹುದ್ದೆಗಳ ಭರ್ತಿಗೆ ನೋಟಿಫಿಕೇಷನ್ ಹೊರಡಿಸಲಾಗಿತ್ತು, ಇದೀಗ ಮತ್ತೆ 459 ಹುದ್ದೆಗಳ ಭರ್ತಿಗೆ ಮತ್ತೊಂದು ಅಧಿಸೂಚನೆ ಹೊರಡಿಸಲಾಗಿದೆ. ಹೀಗಾಗಿ ಒಟ್ಟು 627 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದೆ.
ಇದನ್ನೂ ಓದಿ : ಸಾಯಲು ನೀರಿಗೆ ಹಾರಿದ ಪ್ರೇಮಿಗಳು : ದಡಕ್ಕೆ ತಂದು ಕನ್ನೆಗೆ ಬಾರಿಸಿದ ಮೀನುಗಾರರು ; ವಿಡಿಯೋ ವೈರಲ್.!
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿವಿಧ ಹುದ್ದೆಗಳಿಗೆ ಅನುಗುಣವಾಗಿ, ಆಕರ್ಷಕ ಸಂಬಳ ವಿರಲಿದ್ದು, ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು.
ಹುದ್ದೆಗಳ ವಿವರ :
ಸಂಸ್ಥೆ : ಬ್ಯಾಂಕ್ ಆಫ್ ಬರೋಡಾ.
ಒಟ್ಟು ಹುದ್ದೆಗಳು : 627.
ವಿದ್ಯಾರ್ಹತೆ : ಯಾವುದೇ ಪದವಿ.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಮೂಲ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ ; ನಾಳೆಯೇ ಕೊನೆಯ ದಿನ.!
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಶುಲ್ಕ :
ಸಾಮಾನ್ಯ ಕೆಟಗರಿ ಅಭ್ಯರ್ಥಿಗಳು : 600ರೂ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು : 600ರೂ.
ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು : 100 ರೂ.
ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 2, 2024.
ಪ್ರಮುಖ ಲಿಂಕ್ :
ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.
Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.