Wednesday, January 22, 2025
HomeBelagavi NewsBelagavi : ಘಟಪ್ರಭಾ ನದಿ ಹಿನ್ನಿರಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು...
spot_img
spot_img
spot_img
spot_img

Belagavi : ಘಟಪ್ರಭಾ ನದಿ ಹಿನ್ನಿರಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲು.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಳಗಾವಿ : ಹುಕ್ಕೇರಿ ತಾಲೂಕು ಬೆನಕನಹೊಳಿ ಬಳಿಯ ಘಟಪ್ರಭಾ ನದಿ (Ghataprabha river) ಹಿನ್ನಿರಿನ ಪ್ರದೇಶದಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲಾಗಿರುವ ಭೀಕರ ದುರ್ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ (49)ಮತ್ತು ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ (12) ಮೃತ ಪಟ್ಟವರು.

ಇದನ್ನು ಓದಿ : NIA : ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಲಕ್ಷ್ಮಣ ಹಾಗೂ ಅವರ ಮಕ್ಕಳು ಭಾನುವಾರ (Sunday) ಸಂಜೆ ಬೈಕ್ ನಿಲ್ಲಿಸಿ ಮೀನು ಹಿಡಿಯಲು ನದಿಯ ನೀರಿಗೆ ಇಳಿದಿದ್ದರು. ಸೋಮವಾರ ಬೆಳಗ್ಗೆ ವರೆಗೂ ಮನೆಗೆ ವಾಪಸ್ಸು ಬಾರದೇ ಇರುವುದರಿಂದ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಎನ್.ಡಿ.ಆರ್.ಎಫ್ ತಂಡ (NDRF team) ಹಾಗೂ ಯಮಕನಮರಡಿ ಪೊಲೀಸರು (Yamakanamaradi Police) ಕಾರ್ಯಾಚರಣೆ ನಡೆಸಿದ್ದಾರೆ.

ಹಿಂದಿನ ಸುದ್ದಿ : Astrology : ನವೆಂಬರ್ 18ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2024 ನವೆಂಬರ್ 18ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ ಮತ್ತು ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಸ್ನೇಹಿತರ ಸಹಾಯ ಮತ್ತು ಸಹಕಾರ ದೊರೆಯುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೂರ ಪ್ರಯಾಣದ ಸೂಚನೆಗಳಿವೆ. ನಿಮ್ಮ ಸಹೋದರರಿಂದ ನೀವು ಹಣವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳು ತೃಪ್ತಿಕರವಾಗಿರುತ್ತವೆ. ವ್ಯವಹಾರದಲ್ಲಿ ಆತುರ ಒಳ್ಳೆಯದಲ್ಲ.

*ವೃಷಭ ರಾಶಿ*
ಕುಟುಂಬ ಸದಸ್ಯರೊಂದಿಗೆ ವಿವಾದ ಉಂಟಾಗುತ್ತದೆ. ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೂಡಿಕೆಗಳ ವಿಷಯದಲ್ಲಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕುಟುಂಬದ ಮುಖ್ಯಸ್ಥರ ಆರೋಗ್ಯದ ವಿಷಯದಲ್ಲಿ ಜಾಗ್ರತೆ ವಹಿಸಬೇಕು.

ಇದನ್ನು ಓದಿ : ರಾತ್ರೋರಾತ್ರಿ BPL ನಿಂದ APL ಕಾರ್ಡ್’ಗೆ ಶಿಪ್ಟ್ ಆದ 60,000 ರೇಷನ್ ಕಾರ್ಡ್‌ಗಳು.!

*ಮಿಥುನ ರಾಶಿ*
ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ವೃತ್ತಿಪರ ವ್ಯಾಪಾರಗಳು ಅನುಕೂಲಕರವಾಗಿರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ದೊರೆಯುತ್ತವೆ.

*ಕಟಕ ರಾಶಿ*
ಕೆಲವು ವ್ಯವಹಾರಗಳಲ್ಲಿ ಕುಟುಂಬದ ಸದಸ್ಯರು ಸಹಾಯ ಮಾಡುತ್ತಾರೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಪಾಲುದಾರಿಕೆ ವ್ಯವಹಾರಗಳು ಲಾಭವನ್ನು ಪಡೆಯುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ, ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ.

*ಸಿಂಹ ರಾಶಿ*
ಬಂಧುಮಿತ್ರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಹಣಕಾಸಿನ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ದೂರದ ಪ್ರದೇಶಗಳ ಜನರಿಂದ ದೊರೆತ ಮಾಹಿತಿ ಕುತೂಹಲ ಮೂಡಿಸುತ್ತದೆ. ವ್ಯಾಪಾರ ವಹಿವಾಟುಗಳು ವೇಗಗೊಳ್ಳುತ್ತವೆ. ವೃತ್ತಿಪರ ಉದ್ಯೋಗಗಳಿಗೆ ಸಂಬಂಧಿಸಿದಂತೆ ಶುಭ ಸುದ್ದಿ ದೊರೆಯತ್ತದೆ.

*ಕನ್ಯಾ ರಾಶಿ*
ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಎದುರಾದರೂ ಧೈರ್ಯದಿಂದ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಆಕಸ್ಮಿಕ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಮಾರಾಟದಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿ ಪ್ರಗತಿ ಕಂಡುಬರುತ್ತದೆ.

ಇದನ್ನು ಓದಿ : ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಗ್ರಾ.ಪಂ. ಅಧ್ಯಕ್ಷ; ಮುಂದೆನಾಯ್ತು? Video ನೋಡಿ.!

*ತುಲಾ ರಾಶಿ*
ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಸ್ಥಾನಮಾನಗಳನ್ನು ಪಡೆಯುತ್ತೀರಿ. ವ್ಯವಹಾರದಲ್ಲಿ ಅಡೆತಡೆಗಳನ್ನು ನಿವಾರಿಸುತ್ತೀರಿ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ದೂರದ ಪ್ರದೇಶಗಳಿಂದ ಸ್ನೇಹಿತರಿಂದ ಪ್ರಮುಖ ವಿಷಯಗಳನ್ನು ಸಂಗ್ರಹಿಸಲಾಗುತ್ತದೆ.

*ವೃಶ್ಚಿಕ ರಾಶಿ*
ದೀರ್ಘ ಕಾಲದ ವಿವಾದಗಳು ದೂರವಾಗಿ ಮಾನಸಿಕ ನೆಮ್ಮದಿ ದೊರೆಯುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಸಣ್ಣ ಲಾಭವನ್ನು ಪಡೆಯಲಾಗುತ್ತದೆ. ಭೂಮಿ ಸಂಬಂಧಿತ ಮಾರಾಟದಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ಸಹೋದರರಿಂದ ಅನಿರೀಕ್ಷಿತ ಧನ ಸಹಾಯ ದೊರೆಯುತ್ತದೆ.

*ಧನುಸ್ಸು ರಾಶಿ*
ಭೋಜನ ಮನೋರಂಜನಾ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹವನ್ನು ಪಡೆಯುತ್ತೀರಿ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ದೀರ್ಘಾವಧಿ ಸಾಲದ ಹೊರೆಯಿಂದ ಹೊರಬರುತ್ತೀರಿ. ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ.

*ಮಕರ ರಾಶಿ*
ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲದಿಂದ ಸ್ಥಾನಮಾನ ಹೆಚ್ಚಾಗುತ್ತದೆ. ಸಮಾಜದಲ್ಲಿ ಗೌರವಗಳು ಹೆಚ್ಚಾಗುತ್ತದೆ. ಶತ್ರುಗಳಿಂದ ಅನಿರೀಕ್ಷಿತ ಆಹ್ವಾನಗಳನ್ನು ಸ್ವೀಕರಿಸುತತಿರಿ.

ಇದನ್ನು ಓದಿ : Belagavi : ಅಡ್ಡಾದಿಡ್ಡಿ ಲಾರಿ ಚಲಾಯಿಸಿದ್ದಕ್ಕೆ ಚಾಲಕನ ಹತ್ಯೆ; ಐವರು ಆರೋಪಿಗಳು ಅರೆಸ್ಟ್.!

*ಕುಂಭ ರಾಶಿ*
ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಪ್ರಯಾಣದ ಸಮಯದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಆರ್ಥಿಕ ಸ್ಥಿತಿ ಕಳಪೆಯಾಗಿದ್ದರೂ ಅಗತ್ಯಕ್ಕೆ ಹಣ ಸಿಗುತ್ತದೆ. ಮಕ್ಕಳ ವಿವಾಹ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ.

*ಮೀನ ರಾಶಿ*
ಕೈಗೊಂಡ ಕೆಲಸಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹಿರಿಯರಿಂದ ಮೆಚ್ಚುಗೆ ಪಡೆಯುತ್ತೀರಿ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ವಾಹನ ಖರೀದಿ ಪ್ರಯತ್ನ ಫಲ ನೀಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಅಡೆತಡೆಗಳು ಉಂಟಾಗುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!