Friday, October 18, 2024
spot_img
spot_img
spot_img
spot_img
spot_img
spot_img
spot_img

Belagavi : ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬಿದ್ದ ಬೈಕ್; ದಂಪತಿ ಸಾವು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೇಗಿನಹಾಳ ಗ್ರಾಮದ ಘಟಪ್ರಭಾ ನದಿಯ ಸೇತುವೆ ಮೇಲೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಇದನ್ನು ಓದಿ : SSLC ಪಾಸಾದವರಿಗೆ ಗುಡ್ ನ್ಯೂಸ್ : BESCOM ನಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ.!

ಸಾವಿಗೀಡಾದವರು ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ (45) ಎಂದು ತಿಳಿದು ಬಂದಿದೆ.

ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್‌ ಮೇಲೆ ತೆರಳುವಾಗ ನೇಗಿನಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಈ ಅವಘಡ ಸಂಭವಿಸಿದೆ.

ಸದ್ಯ ಜಯಶ್ರೀ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸುರೇಶ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ‌ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court

ಸೇತುವೆಗೆ ತಡೆಗೋಡೆ ನಿರ್ಮಿಸದೇ ನೀರಾವರಿ ಇಲಾಖೆಯ ನಿರ್ಲಕ್ಷ್ಯ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್‌‍ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಕ್ಕೇರಿ ಪೊಲೀಸ್‌‍ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img