ಜನಸ್ಪಂದನ ನ್ಯೂಸ, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮತ್ತೊಬ್ಬರು ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಗ್ರಾಮದ ಬಳಿ, ಬೆಳಗಾವಿ–ಬಾಗಲಕೋಟೆ ರಾಜ್ಯ ಹೆದ್ದಾರಿ ಮಾರ್ಗದಲ್ಲಿ ರವಿವಾರ ಸಾಯಂಕಾಲ ನಡೆದಿದೆ. ಮಾಹಿತಿಯ ಪ್ರಕಾರ, ಯರಗಟ್ಟಿಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಭಾರೀ ಡಿಕ್ಕಿ ಹೊಡೆದಿದೆ.
VTU ನೇಮಕಾತಿ 2025 : ಗ್ರಂಥಪಾಲಕ ಮತ್ತು ಲ್ಯಾಬ್ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಳಗಾವಿ (Belagavi) ತಾಲೂಕಿನ ಕರಿಕಟ್ಟಿ ಗ್ರಾಮದ ಸಚಿನ್ ಯಲ್ಲಪ್ಪ ಬೋರಿಮರದ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಿತನಹಳ್ಳಿ ಗ್ರಾಮದ ಬಾಲಕೃಷ್ಣ ಬಸಪ್ಪ ಸುಲದಾಳ (19) ಆಸ್ಪತ್ರೆಗೆ ಸಾಗಿಸುವ ಮುನ್ನವೇ ಜೀವ ಕಳೆದುಕೊಂಡಿದ್ದಾರೆ. ಇನ್ನು ಕಾರಿನಲ್ಲಿದ್ದ ಮತ್ತೊಬ್ಬ ಯುವಕನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ (Belagavi) ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಡಿವೈಎಸ್‌ಪಿ ಡಾ.ವೀರಯ್ಯ ಹಿರೇಮಠ, ಸಿಪಿಐ ಗಜಾನನ ನಾಯ್ಕ, ಪಿಎಸ್‌ಐ ಈರಪ್ಪ ರಿತ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿದರು.
Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್ ಕುಡಿಯಿರಿ.!
ಪ್ರಾಥಮಿಕ ಮಾಹಿತಿಯಂತೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಅವರಗೋಳ ಗ್ರಾಮಕ್ಕೆ ತಮ್ಮ ಮನೆಯ ಕುಟುಂಬ ಸದಸ್ಯರೊಬ್ಬರಿಗೆ ಸರಾಯಿ ಬಿಡಿಸುವ ಔಷಧಿ ತರಲು ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗುತ್ತಿದೆ.

ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇನ್ನು ಗಾಯಾಳುವನ್ನು ವಾಹನದಿಂದ ಹೊರತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.
Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್ ಕುಡಿಯಿರಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರ ಹಾಗೂ ಪಾನೀಯಗಳ ರುಚಿ ಹೆಚ್ಚಿಸಲು ಸಾಮಾನ್ಯವಾಗಿ ಬಳಸುವ ಸೆಲರಿ (Celery), ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ ಸೆಲರಿ ನೀರು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ತೂಕ ಇಳಿಸಲು ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಸೆಲರಿ (Celery) ನೀರು ತಯಾರಿಸುವ ಸರಳ ವಿಧಾನ :
ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ತೆಗೆದುಕೊಳ್ಳಿ. ಅದಕ್ಕೆ ಒಂದು ಚಮಚ ಸೆಲರಿ (Celery) ಸೇರಿಸಿ ಮಧ್ಯಮ ಉರಿಯಲ್ಲಿ ಕುದಿಸಿ. ನೀರು ಅರ್ಧಕ್ಕೆ ಇಳಿದ ಬಳಿಕ ಗ್ಯಾಸ್ ಆಫ್ ಮಾಡಿ. ತಣ್ಣಗಾದ ನಂತರ ಫಿಲ್ಟರ್ ಮಾಡಿ ಲೋಟದಲ್ಲಿ ಹಾಕಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ ಫಲಿತಾಂಶ ನೀಡುತ್ತದೆ.
ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!
ಚಯಾಪಚಯ ಕ್ರಿಯೆ ಹೆಚ್ಚಿಸಿ ಕೊಬ್ಬು ಕರಗಿಸುವ ಗುಣ :
ಸೆಲರಿ (Celery) ನೀರಿನಲ್ಲಿರುವ ಪೋಷಕಾಂಶಗಳು ದೇಹದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ದಿನನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸುಮಾರು 30 ದಿನಗಳವರೆಗೆ ಸೇವಿಸಿದರೆ ತೂಕ ಇಳಿಕೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು.
ಸೆಲರಿ (Celery) ಯಿಂದಾಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳು :
- ಹೊಟ್ಟೆಯ ಸಮಸ್ಯೆಗಳನ್ನು ತಗ್ಗಿಸಲು ಸಹಕಾರಿ
- ಕರುಳಿನ ಆರೋಗ್ಯ ಸುಧಾರಣೆ
- ಸಂಧಿವಾತ ನೋವಿನಿಂದ ನಿವಾರಣೆ
- ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ನೆರವು.
ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ಸೆಲರಿ (Celery) ನೀರನ್ನು ನಿಯಮಿತವಾಗಿ ಆಹಾರ ಯೋಜನೆಯಲ್ಲಿ ಸೇರಿಸಿಕೊಳ್ಳುವುದರಿಂದ ದೇಹದ ಸಮಗ್ರ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.
> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.






