ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಲಿಂಬೆಹಣ್ಣು, ಅರಿಶಿಣ, ಕುಂಕುಮ ಮುಂತಾದ ವಸ್ತುಗಳನ್ನು ಬಳಸುವ ಮೂಲಕ ವಾಮಾಚಾರ (Black-magic) ವನ್ನು ಮಾಡುವುದುಂಟು, ಆದರೆ ಇಲ್ಲಿ ಜಮೀನಿನಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯ ಮಾಡಿರುವುದು ಕಂಡುಬಂದಿದೆ.
ಗ್ರಾಮದ ರೈತ ದೇಸಾಯಿ ಅವರ ಜಮೀನಿನಲ್ಲಿ ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಸ್ಮಾರ್ಟ್‌ಫೋನ್‌ನೂ ಇರಿಸಿ Black-magic ಮಾಡಲಾಗಿದೆ. ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿಟ್ಟು ಹೋಗಿರುವುದು ಗಮನ ಸೆಳೆದಿದ್ದು, ಘಟನೆ ಹೈಟೆಕ್ ವಾಮಾಚಾರದ ಅಂಗವಾಗಿದೆ ಎಂದು ಊಹಿಸಲಾಗುತ್ತಿದೆ.
ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಗ್ರಾಮಸ್ಥರು ಈ ಘಟನೆ ನೋಡಿ ಆತಂಕ ವ್ಯಕ್ತಪಡಿಸಿದ್ದು, ಸ್ಥಳೀಯ ರೈತ ಮುಖಂಡ ರಾಜು ಅವರಿಗೆ ಕರೆ ಮಾಡಿ ವಾಮಾಚಾರ (Black-magic) ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆಯೂ ಸಹ ಕೆಲವು ತಿಂಗಳಲ್ಲಿಯೂ ಈ ಜಮೀನಿನಲ್ಲಿ ಅನಾಮಿಕ ವಸ್ತುಗಳು ಕಂಡು ಬಂದಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದಿದೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ತಂತ್ರಜ್ಞಾನದ ಟಚ್ ನೀಡಿ ವಾಮಾಚಾರ (Black-magic) ಮಾಡಿರುವುದು ಒಂದು ರೀತಿಯ ಆಶ್ಚರ್ಯಕರವಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿ ಸತ್ಯ ಬಹಿರಂಗಪಡಿಸಬೇಕಿದೆ” ಎಂದು ಗ್ರಾಮಸ್ಥರ ಅಭಿಪ್ರಾಯವಾಗಿದೆ.
Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಜನಸ್ಪಂದನ ನ್ಯೂಸ್, ಕೊಪ್ಪಳ : ಕೊಪ್ಪಳ ನಗರದಲ್ಲಿ ಭಾನುವಾರ ರಾತ್ರಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರೀತಿ ಸಂಬಂಧಿತ ವಿಚಾರವೇ ಈ ಕೊಲೆ (Murder) ಗೆ ಕಾರಣ ಎನ್ನಲಾಗುತ್ತಿದ್ದು, ಪ್ರಕರಣದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸಾದಿಕ್ ಎನ್ನಲಾಗುತ್ತಿದೆ. ಮೂಲ ಮಾಹಿತಿಯಂತೆ, ಗವಿಸಿದ್ದಪ್ಪ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನಂತೆ, ಈ ಹಿನ್ನಲೆಯಲ್ಲಿ ಕೊಲೆ (Murder) ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಪ್ರೀತಿ ವಿಚಾರಕ್ಕೆ ಕೊಲೆ (Murder) .?
ಪ್ರೀತಿಯ ವಿಚಾರಕ್ಕೆ ಉಂಟಾದ ವೈಷಮ್ಯದಿಂದಾಗಿ ಸಾದಿಕ್, ಗವಿಸಿದ್ದಪ್ಪನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದಾಗಿ ತಿಳಿದು ಬಂದಿದೆ. ಘಟನೆ (Murder) ಯ ನಂತರ ಆರೋಪಿ ಸಾದಿಕ್ ನೇರವಾಗಿ ನಗರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಸಾದಿಕ್ ಸೇರಿ ನಾಲ್ವರು ವಿರುದ್ಧ ದೂರು ದಾಖಲಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಂಜೆ 7.30ರ ಸುಮಾರಿಗೆ ಗವಿಸಿದ್ದಪ್ಪನನ್ನು ನಡುರಸ್ತೆಯಲ್ಲಿ ಹಲ್ಲೆ ಮಾಡಿ ಕೊಲೆ (Murder) ಮಾಡಿದನೆಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದ್ದು, ಇನ್ನೂ ಮೂವರು ವ್ಯಕ್ತಿಗಳ ಭಾಗವಹಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಈ ಘಟನೆ ಸ್ಥಳೀಯವಾಗಿ ಉದ್ವೇಗ ಮೂಡಿಸಿರುವುದರ ಜೊತೆಗೆ, ಸಾಮಾಜಿಕ ಮಾಧ್ಯಮ ಬಳಕೆಯ ಅಪಾಯಗಳ ಕುರಿತ ಚರ್ಚೆಗೂ ಕಾರಣವಾಗಿದೆ.





