ಜನಸ್ಪಂದನ ನ್ಯೂಸ್, ಬೆಳಗಾವಿ/ಐನಾಪುರ : ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯೊಂದು ಜನರ ಗಮನ ಸೆಳೆದಿದೆ. ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಲಾರಿಗೆ ಸಾರ್ವಜನಿಕರು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ ಅಪಾರ ಪ್ರಮಾಣದ ಗೋಮಾಂಸವನ್ನು ಸಾಗಿಸುತ್ತಿದ್ದರೆಂಬ ಸುಳಿವು ಸಾರ್ವಜನಿಕರಿಗೆ ದೊರಕಿತ್ತು. ಇದನ್ನು ಆಧರಿಸಿ, ಬೆಳಗಾವಿ (Belagavi) ಜಿಲ್ಲೆಯ ಐನಾಪುರ ಗ್ರಾಮದ ಉಗಾರ ರಸ್ತೆಯ ಶ್ರೀ ಸಿದ್ದೇಶ್ವರ ಗುಡಿಯ ಹತ್ತಿರ ರಾತ್ರಿ 10 ಗಂಟೆಯ ಸುಮಾರಿಗೆ ಲಾರಿಯನ್ನು ತಡೆ ಹಿಡಿದು ಪರಿಶೀಲಿಸಲಾಯಿತು.
8 ತಿಂಗಳಲ್ಲೇ ವಿಚ್ಛೇದನಕ್ಕೆ ಅರ್ಜಿ ಹಾಕಿದ Couple ; ಸಂಸಾರಕ್ಕೆ ಹುಳಿ ಹಿಂಡಿದ್ದು ನಾಯಿ, ಬೆಕ್ಕು ಮತ್ತು ಮೀನು.!
ಚಾಲಕರನ್ನು ವಿಚಾರಿಸಿದ ನಂತರ ವಾಹನವನ್ನು ತಪಾಸಣೆ ಮಾಡಿದಾಗ ಸುಮಾರು ಐದು ಟನ್ ಗೂ ಹೆಚ್ಚು ಗೋಮಾಂಸ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಬಳಿಕ ಆಕ್ರೋಶಗೊಂಡ ಜನರು ಲಾರಿಗೆ ಬೆಂಕಿ ಹಚ್ಚಿದರು. ಬೆಂಕಿ ಶಮನ ದಳ ಹಾಗೂ ಉಗಾರ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಲಾರಿ ಸಂಪೂರ್ಣವಾಗಿ ಸುಟ್ಟುಹೋಯಿತು.
ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಗವಾಡ (Belagavi Dist) ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಐನಾಪುರ ಗ್ರಾಮ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಲಾಗಿದೆ. ಇಬ್ಬರು ಡಿಎಸ್‌ಪಿ, ನಾಲ್ಕು ಸಿಪಿಐ, ಎಂಟು ಪಿಎಸ್‌ಐ ಸೇರಿ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
Minor :ಮದುವೆಯ ಭರವಸೆ ಅಪ್ರಾಪ್ತೆಯ ಮೇಲೆ ದೌರ್ಜನ್ಯ ; ಆರೋಪಿಗೆ 30 ವರ್ಷ ಶಿಕ್ಷೆ.!
ಎರಡು ಪ್ರತ್ಯೇಕ ಪ್ರಕರಣ ದಾಖಲು :
ಪೊಲೀಸ್ ಇಲಾಖೆಯ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಿಸಲಾಗಿದೆ. ಅಕ್ರಮ ಮಾಂಸ ಸಾಗಾಣಿಕೆಗೆ ಸಂಬಂಧಿಸಿ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಪ್ರಾಣಿ ಹಿಂಸೆ ಕಾಯ್ದೆ ಅಡಿ ಇಬ್ಬರನ್ನು ಬಂಧಿಸಲಾಗಿದೆ.
ಅದೇ ರೀತಿ, ಲಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ದರೋಡೆ ಹಾಗೂ ಅಟ್ರಾಸಿಟಿ ಕಾಯ್ದೆ ಅಡಿ ಐವರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ತೀವ್ರಗೊಳಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು Belagavi SP ಭೀಮಶಂಕರ ಗುಳೇದ ತಿಳಿಸಿದ್ದಾರೆ.
3ನೇ ಮಹಡಿಯಿಂದ ಬಿದ್ದು ಪವಾಡ ಸದೃಶವಾಗಿ ಪಾರಾದ Person.!
ಈ ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ಜನರನ್ನು ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.
Husband : ಅಕ್ರಮ ಸಂಬಂಧ ಶಂಕೆ ; ಹೆಂಡತಿಯನ್ನು 11 ಬಾರಿ ಚಾಕು ಇರಿದು ಕೊಂದ ಗಂಡ.!

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಎಲ್ಲರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದೆ. ಪತ್ನಿ ಮೇಲೆ ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿದ ಪತಿ (Husband), ಈ ದಿನದ ಬೆಳಗ್ಗೆ ಸಾರ್ವಜನಿಕರ ಎದುರಲ್ಲೇ ಆಕೆಯನ್ನು 11 ಬಾರಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಸಂಕದಕಟ್ಟೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಘಟನೆ ಹೇಗೆ ನಡೆದಿದೆ?
ಸೋಮವಾರ ಬೆಳಿಗ್ಗೆ ಸುಮಾರು 11.35ರ ಹೊತ್ತಿಗೆ, ಶಿರಾ ಮೂಲದ ರೇಖಾ ಎಂಬ ಮಹಿಳೆ ತನ್ನ 12 ವರ್ಷದ ಮಗಳೊಂದಿಗೆ ಬಸ್ ನಿಲ್ದಾಣದಲ್ಲಿ ನಿಂತಿದ್ದಳು. ಈ ವೇಳೆಯಲ್ಲಿ ಆಕೆಯ ಎರಡನೇ ಪತಿ (Husband) ಯಾಗಿರುವ ಲೋಕೇಶ್ ಅಲಿಯಾಸ್ ಲೋಹಿತಾಶ್ವ ಸ್ಥಳಕ್ಕೆ ಬಂದು ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿನ ಚಕಮಕಿಯ ಮಧ್ಯೆ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ಗಾಯಾಳುವನ್ನು ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿದರೂ, ತೀವ್ರ ರಕ್ತಸ್ರಾವದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ರೇಖಾ ಸಾವನ್ನಪ್ಪಿದರು. ವೈದ್ಯರ ಪ್ರಕಾರ, ಆಕೆಯ ದೇಹದ ಮೇಲೆ ಒಟ್ಟು 11 ಚಾಕು ಇರಿತದ ಗುರುತುಗಳು ಕಂಡುಬಂದಿವೆ.
ರೇಖಾ – ಲೋಕೇಶ್ ಸಂಬಂಧ :
ಪೊಲೀಸ್ ತನಿಖೆಯ ಪ್ರಕಾರ, ರೇಖಾ ಈಗಾಗಲೇ ಒಮ್ಮೆ ಮದುವೆಯಾಗಿದ್ದು, ಇಬ್ಬರು ಮಕ್ಕಳ ತಾಯಿ. ಮೊದಲ ಪತಿಯಿಂದ ವಿಚ್ಛೇದನ ಪಡೆದ ನಂತರ, ಕೆಲವು ವರ್ಷಗಳಿಂದ ಲೋಕೇಶ್ ಜೊತೆ ಸಂಪರ್ಕದಲ್ಲಿದ್ದರು. ಇಬ್ಬರೂ ಕೆಲ ತಿಂಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಲೋಕೇಶ್ ಕೂಡ ತನ್ನ ಮೊದಲ ಹೆಂಡತಿಯನ್ನು ಬಿಟ್ಟು ರೇಖಾ ಜೊತೆ ಬದುಕುತ್ತಿದ್ದ.
ಬೆಂಗಳೂರಿಗೆ ಬಂದ ನಂತರ, ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇಖಾ, ಲೋಕೇಶ್‌ಗೆ ಕೂಡ ಅದೇ ಕಂಪನಿಯಲ್ಲಿ ಡ್ರೈವರ್ ಕೆಲಸ ಒದಗಿಸಿದ್ದರು. ಆದರೆ, ರೇಖಾ ಮತ್ತೊಬ್ಬರೊಂದಿಗೆ ಸಂಬಂಧ ಬೆಳೆಸುತ್ತಿದ್ದಾಳೆ ಎಂಬ ಶಂಕೆಯಿಂದ ಪತಿ (Husband) ಲೋಕೇಶ್ ಕೋಪಗೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಇದೇ ಕಾರಣದಿಂದ ಕೊಲೆ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಆರೋಪಿ ಪತಿ (Husband) ಯ ಶೋಧ :
ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಸ್ತುತ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಾಗಿ ಬೇಟೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
👉 ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಸಾರ್ವಜನಿಕ ಸ್ಥಳದಲ್ಲೇ ನಡೆದ ಹಿಂಸಾಚಾರ ಜನರಲ್ಲಿ ಭಯವನ್ನುಂಟುಮಾಡಿದೆ.






