ಜನಸ್ಪಂದನ ನ್ಯೂಸ್, ಬೆಳಗಾವಿ : ಪಿಯುಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸ್ ಠಾಣಾ (Harugeri Police Station) ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿ ಮೇಲೆ ಗ್ಯಾಂಗ್ರೇಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಷೇಕ, ಆದಿಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಸಹಾಯಕ ಅಕೌಂಟೆಂಟ್ ಮತ್ತು ಲೈಬ್ರರಿಯನ್ ಸೇರಿ 2,882 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಪ್ರಕರಣದ ಹಿನ್ನೆಲೆ :
ಆರೋಪಿ ಅಭಿಷೇಕ್, ಇನ್ಸ್ಟಾಗ್ರಾಮ್ನಲ್ಲಿ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಆಬಳಿಕ ಅಥಣಿ ತಾಲೂಕಿನ ಜಾತ್ರೆಯೊಂದಕ್ಕೆ ಬಂದಿದ್ದ ಇಬ್ಬರು ಭೇಟಿಯಾಗಿ ಪರಿಚಯ ಮಾಡಿಕೊಂಡಿದ್ದಾರೆ.
ಜನವರಿ 3ರಂದು ಸವದತ್ತಿಯ ರೇಣುಕಾದೇವಿಗೆ ಹೋಗಿ ಬರೋಣ (Let’s go to Savadatti Renukadevi) ಎಂದು ಬಾಲಕಿಯನ್ನು ಪುಸಲಾಯಿಸಿ ಅಭಿಷೇಕ್ ಕರೆದುಕೊಂಡು ಹೋಗಿದ್ದ. ಇನ್ನೂ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಅಭಿಷೇಕ ಜೊತೆ ಬಾಲಕಿ ತೆರಳಿದ್ದಳು. ಅಭಿಷೇಕ್ ಸಹ ತನ್ನ ಜೊತೆ ಆದಿಲ್, ಕೌತುಕ್ ಎಂಬಾತನನ್ನು ಕರೆದುಕೊಂಡು ಬಂದಿದ್ದ.
ಇದನ್ನು ಓದಿ : ಸಿಎಂ ಸಿದ್ದು ಹೆಸರಿನಲ್ಲಿ Free Recharge ಅಂತಾ ಲಿಂಕ್ ಬಂತಾ ; ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ.!
ಮೂವರು ಆರೋಪಿಗಳು ಎರ್ಟಿಗಾ ಕಾರಿನಲ್ಲಿ ಇಬ್ಬರು ಬಾಲಕಿಯರನ್ನು ಕರೆದುಕೊಂಡು ಹೋಗಿದ್ದರು. ಸವಸುದ್ದಿ ಸಮೀಪ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಓರ್ವಳ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಮತ್ತೋರ್ವ ಬಾಲಕಿಯ ಮೇಲೆ ಕಾರಿನಲ್ಲೇ ಇನ್ನೋರ್ವ ಆರೋಪಿ ಅತ್ಯಾಚಾರ ಮಾಡಿದ್ದಾನೆ.
ಅತ್ಯಾಚಾರ ಹಾಗೂ ಗ್ಯಾಂಗ್ ರೇಪ್ ಮಾಡಿ ಅದರ ವಿಡಿಯೋವನ್ನೂ ಕೂಡ ಮಾಡಿಕೊಂಡಿದ್ದರು. ಈ ವಿಡಿಯೋ ಇಟ್ಟುಕೊಂಡು ಮತ್ತೆ ನೊಂದ ಬಾಲಕಿಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ನಮ್ಮ ಜೊತೆಗೆ ಮುಂದಿನ ವಾರ ಗೋವಾಗೆ ಬರಬೇಕು, ಬರದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ (blackmail) ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಬೆಕ್ಕಿನ ಮರಿ ಓಡಿಸಿದಂತೆ ಚಿಕ್ಕ ಕೋಲು ಹಿಡಿದು ಸಿಂಹವನ್ನು ಓಡಿಸಿದ ವ್ಯಕ್ತಿ ; Video ನೋಡಿ.!
ಜ. 13ರಂದು ಹಾರೂಗೇರಿ ಪೊಲೀಸ್ ಠಾಣೆಗೆ ಬಾಲಕಿ ದೂರು (complaint) ನೀಡಿದ್ದಳು. ದೂರಿನ ಮೇರೆಗೆ ಕೇಸ್ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದಿನ ಸುದ್ದಿ : ಪ್ರೇಯಸಿಯ ಖಾಸಗಿ Video, ಪೋಟೋ ವೈರಲ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ.!
ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್ನಲ್ಲಿ (Unakal of Hubli) ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ (suicide) ಘಟನೆ ನಡೆದಿದೆ.
ಇದನ್ನು ಓದಿ : ಮಧ್ಯರಾತ್ರಿ ಕರೆದಳೆಂದು ಗೆಳತಿಯ ಮನೆಗೆ ಹೋದ Lover ; ಬೆಳಗಾಗುವುದರಲ್ಲಿ ಆದದ್ದೇ ಬೇರೆ.!
ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ್ ಉಣಕಲ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದು (missing), ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇದನ್ನು ಓದಿ : 7 ಮದುವೆ ಮುಚ್ಚಿಟ್ಟು ಮತ್ತೆ ಮದುವೆಯಾಗಿದ್ದ Lady ; ವಿಚಾರ ತಿಳಿದು ಪತಿ ಮಾಡಿದ್ದೇನು ಗೊತ್ತಾ.?
ಸಂದೇಶ್ ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಶನಿವಾರ ದಿಢೀರ್ (suddenly) ಅಂತ ಮನೆಯಿಂದ ನಾಪತ್ತೆಯಾಗಿದ್ದ.
ಈ ಕುರಿತು ಕುಟುಂಬದವರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಸಂದೇಶ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ತೊಡೆ ಮೇಲೆ Girlfriend ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಕಾರು ಚಲಾಯಿಸಿದ ಯುವಕ.!
ಆತ್ಮಹತ್ಯೆಗೂ ಮುನ್ನ ಸಂದೇಶ್, ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ಅಲ್ಲದೇ ತನ್ನ ಪ್ರೇಯಸಿಯ ಜೊತೆಗಿನ ಖಾಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ (He posted private video, whatsapp chat, conversation and photos with his girlfriend to his friends and on social media) ಎನ್ನಲಾಗಿದೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (Register a case), ಪೊಲೀಸರು ತನಿಖೆ ನಡೆಸುತ್ತಿದ್ದಾರೆ.