Wednesday, September 17, 2025

Janaspandhan News

HomeBelagavi NewsDharmasthala ಅಪಪ್ರಚಾರದ ವಿರುದ್ಧ ಬೆಳಗಾವಿಯಲ್ಲಿ ಹಿಂದೂ ಸಮಾಜದ ಬೃಹತ್ ಪ್ರತಿಭಟನೆ.!
spot_img
spot_img
spot_img

Dharmasthala ಅಪಪ್ರಚಾರದ ವಿರುದ್ಧ ಬೆಳಗಾವಿಯಲ್ಲಿ ಹಿಂದೂ ಸಮಾಜದ ಬೃಹತ್ ಪ್ರತಿಭಟನೆ.!

- Advertisement -

ಜನಸ್ಪಂದನ ನ್ಯೂಸ್‌, ಬೆಳಗಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala)ವು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೇರಿದ ಕ್ಷೇತ್ರವಲ್ಲ, ಇದು ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದೆ. ಈ ಪವಿತ್ರ ಕ್ಷೇತ್ರ (Dharmasthala) ದ ಬಗ್ಗೆ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ, ಮಂಗಳವಾರ ಬೆಳಗಾವಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಮೌನ ಪ್ರತಿಭಟನೆ ನಡೆಸಿದವು.

ಡಾ. ಪ್ರಭಾಕರ ಕೋರೆ ಅವರ ಪ್ರತಿಕ್ರಿಯೆ :

ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮಾತನಾಡಿ, ಧರ್ಮಸ್ಥಳ (Dharmasthala) ದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸರ್ಕಾರ ಈಗಾಗಲೇ ಎಸ್‌.ಐ.ಟಿ ತನಿಖೆ ನಡೆಸಿದರೂ ಯಾವುದೇ ಸಾಕ್ಷ್ಯ ದೊರೆತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ಇದು ಹಿಂದೂ ಧಾರ್ಮಿಕ ಕ್ಷೇತ್ರವನ್ನು ಹತ್ತಿಕ್ಕುವ ಕುತಂತ್ರ, ಇದರ ಹಿಂದೆ ಯಾರಿದ್ದಾರೆ ಎಂಬುದು ಪತ್ತೆಯಾಗಬೇಕು” ಎಂದರು.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!
ಮಠಾಧೀಶರ ಎಚ್ಚರಿಕೆ :

ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಗುರುಶಾಂತೇಶ್ವರ ಹಿರೇಮಠ ಸೇರಿದಂತೆ ಹಲವಾರು ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಧರ್ಮಸ್ಥಳ (Dharmasthala) ಕ್ಷೇತ್ರವು ಹಿಂದೂ ಸಮಾಜವನ್ನು ಒಗ್ಗೂಡಿಸುವ ಸ್ಥಳವಾಗಿದ್ದು, ಅನೇಕ ಸಮಾಜಮುಖಿ ಕಾರ್ಯಗಳಿಗೆ ಕಾರಣವಾಗಿದೆ. ಡಾ. ವೀರೇಂದ್ರ ಹೆಗ್ಗಡೆ ಅವರ ಸೇವೆಯನ್ನು ಹೊಗಳಿದ ಅವರು, “ಕ್ಷೇತ್ರದ ವಿರುದ್ಧ ಯಾವುದೇ ಪಿತೂರಿ ಸಹಿಸಲಾಗುವುದಿಲ್ಲ” ಎಂದು ಎಚ್ಚರಿಸಿದರು.

ರಾಜಕೀಯ ನಾಯಕರು ಮತ್ತು ಮುಖಂಡರ (Dharmasthala) ಅಭಿಪ್ರಾಯ :

ಶಾಸಕ ಅಭಯ ಪಾಟೀಲ, ಮಾಜಿ ಸಚಿವ ಅನಿಲ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವಾರು ನಾಯಕರು ಮಾತನಾಡಿದರು. “ಅನಾಮಿಕ ವ್ಯಕ್ತಿಯೊಬ್ಬ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ. ಆತನ ಹಿಂದಿರುವ ಕುಮ್ಮಕ್ಕು ಬಹಿರಂಗಗೊಳ್ಳಬೇಕು. ಇಲ್ಲವಾದರೆ ಹಿಂದೂ ಸಮಾಜ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಲಾಯಿತು.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!
ಪ್ರತಿಭಟನೆಯ ವೈಶಿಷ್ಟ್ಯಗಳು :

ಮೌನ ಮೆರವಣಿಗೆ ಧರ್ಮವೀರ ಸಂಭಾಜಿ ವೃತ್ತದಿಂದ ಪ್ರಾರಂಭಗೊಂಡು ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಕಾಕತಿವೇಸ ಹಾಗೂ ರಾಣಿ ಚೆನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಅಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬೃಹತ್ ಪ್ರತಿಭಟನೆಯಲ್ಲಿ ಅನೇಕ ಮಠಾಧೀಶರು, ಧಾರ್ಮಿಕ ನಾಯಕರ ಜೊತೆಗೆ ಸಾವಿರಾರು ಭಕ್ತರು ಭಾಗವಹಿಸಿದರು.


Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

Belagavi

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ (ಆಗಸ್ಟ್ 20) ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದುವರೆಗೆ ಬೆಳಗಾವಿ (Belagavi) ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದ್ದ ರಜೆಯನ್ನು ಈಗ ಸಂಪೂರ್ಣ ಜಿಲ್ಲೆಗೆ ವಿಸ್ತರಿಸಲಾಗಿದೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ರೆಡ್ ಅಲರ್ಟ್ ಘೋಷಣೆ :

ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 20ರವರೆಗೆ ಬೆಳಗಾವಿ (Belagavi) ಜಿಲ್ಲೆಯ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದಾಗಿ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

ಪ್ರವಾಹದ ಅಪಾಯ ಹೆಚ್ಚಳ :

ಹಿಡಕಲ್ ಜಲಾಶಯ ಈಗಾಗಲೇ ಸಂಪೂರ್ಣ ತುಂಬಿಕೊಂಡಿದ್ದು, ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಈಗಾಗಲೇ 25,000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಿಡಕಲ್ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ಬಳಿ ಘಟಪ್ರಭಾ ನದಿಗೆ 40,000 ಕ್ಯೂಸೆಕ್ ನೀರು ಸೇರುತ್ತಿರುವುದರಿಂದ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.

ನಾಗರಿಕರಿಗೆ ಎಚ್ಚರಿಕೆ :
  • ನದಿಪಾತ್ರದ ಬಳಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
  • ಸಂಚಾರದ ವೇಳೆ ಸೇತುವೆಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಬೇಕು.
  • ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸುರಕ್ಷತೆಗೆ ಪೋಷಕರು ವಿಶೇಷ ಗಮನ ಹರಿಸಬೇಕು.
  • ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಂಡಿರಬೇಕು.

belagavi rain holiday red alert

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!
ಬೆಳಗಾವಿ (Belagavi) ಜಿಲಾ ಸಚಿವರ ಮನವಿ :

ಬೆಳಗಾವಿ (Belagavi) ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಾಗರಿಕರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿದ್ದು ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments