ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ನಗರದ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಪಿಎಸ್‌ಐನಿಂದ ಹೆಂಡತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಇದನ್ನು ಓದಿ : Special news : ಇಲ್ಲಿ ಮದುವೆಗೂ ಮುಂಚೆಯೇ ತಾಯಿ ಆಗ್ತಾರೆ ಹೆಣ್ಣು ಮಕ್ಕಳು ; ಭಾರತದ ಈ ಜನಾಂಗದಲ್ಲಿದೆ ವಿಚಿತ್ರ ಸಂಪ್ರದಾಯ.!
ಪಿಎಸ್‌ಐ ಉದ್ದಪ್ಪ ಕಟ್ಟಿಕಾರ್ ಪತ್ನಿ ಪ್ರತಿಮಾ ಮೇಲೆ ಮನಬಂದಂತೆ ಥಳಿಸಿದ್ದಾನೆ ಎನ್ನಲಾಗಿದೆ.
ಉದ್ದಪ್ಪ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದನ್ನು ಪತ್ನಿ ಪ್ರಶ್ನಿಸಿದ್ದಾರೆ.
ಇದನ್ನು ಓದಿ : ಮದುವೆಯೇ ಆಗಿಲ್ಲ ಎಂದ ಸಂಸದರು KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟರು ; ಪೋಟೋ ವೈರಲ್.!
ಈ ದಂಪತಿ ರಾಮತೀರ್ಥ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ರೇಷನ್ ಕಾರ್ಡ್, ಮಕ್ಕಳ ಆಧಾರ ಕಾರ್ಡ್ ಕೇಳಿದ್ದಕ್ಕೆ ಮಕ್ಕಳ ಮುಂದೆಯೇ ಉದ್ದಪ್ಪ, ಪ್ರತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ.
ಪತ್ನಿ ಪ್ರತಿಮಾ ಕಣ್ಣು, ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹಲ್ಲೆಗೊಳಗಾದ ಪತ್ನಿ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲಾಗಿದೆ.
ಇದನ್ನು ಓದಿ : Health : ಎಳನೀರಿನ ಜೊತೆ ಈ ಸೊಪ್ಪನ್ನು ಸೇವಿಸಿ ; ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯ.!
ಪತಿಯಿಂದ ನನಗೆ ಮುಕ್ತಿ ಕೊಡಿಸಿ ಎಂದು ಕೈ ಮುಗಿದು ಪತ್ನಿ ಪ್ರತಿಮಾ ಗೋಳಾಡುತ್ತಿದ್ದಾರೆ. ಈ ಹಿಂದೆಯೂ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಪಿಎಸ್‌ಐ ವಿರುದ್ಧ ಅಂಕೋಲಾದಲ್ಲಿ ಕೇಸ್ ದಾಖಲಾಗಿತ್ತು.
ಈಗ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪ್ರತಿಮಾ ಬೆಳಗಾವಿಗೆ ಬಂದಿದ್ದರು. ಅಂಕೋಲಾಕ್ಕೆ ಹೋಗಲು ನನಗೆ ಅನುಮತಿ ಕೊಡಿಸಿ ಎಂದು ಕಣ್ಣೀರಿಟ್ಟಿದ್ದಾರೆ.