ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಐಗಳಿ (Aigali, Athani Taluk, Belgaum District) ಪೊಲೀಸ್ ಠಾಣೆಯ ಎಎಸ್ಐ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಐಗಳಿ ಪೊಲೀಸ್ ಠಾಣೆಯ ಎಎಸ್ಐ ಶಂಭು ಮೇತ್ರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ (suicide) ಎಂದು ತಿಳಿದು ಬಂದಿದೆ.
ಇದನ್ನು ಓದಿ : ಇವರೇ ನೋಡಿ 33 ವರ್ಷಗಳ ಸೇವಾವಧಿಯಲ್ಲಿ 57 ಬಾರಿ ವರ್ಗಾವಣೆಯಾದ IAS ಅಧಿಕಾರಿ.!
ಎಎಸ್ಐ ಶಂಭು ಮೇತ್ರಿ ಅವರು ಹಲವು ತಿಂಗಳುಗಳಿಂದ ಅನಾರೋಗ್ಯದಿಂದ (Illness) ಬಳಲುತ್ತಿದ್ದರು ಎನ್ನಲಾಗಿದೆ.
ಅವರು ತಮ್ಮ ಸ್ವಂತ ಊರಾದ (Own town) ಅನಂತಪುರದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.