Saturday, July 13, 2024
spot_img
spot_img
spot_img
spot_img
spot_img
spot_img

ವಾಹನ ಸವಾರರಿಗೆ big ಶಾಕ್ : ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ.!

spot_img

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಶನಿವಾರ ಪ್ರಕಟಿಸಿದೆ.

ತೆರಿಗೆ ದರ ಹೆಚ್ಚಳದ ಪರಿಣಾಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ. ಇದರೊಂದಿಗೆ, ಬಹುದಿನಗಳ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ. 

ಇದನ್ನು ಓದಿ : UPSC : 300ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಯುಪಿಎಸ್‌ಸಿ ಅಧಿಸೂಚನೆ ಬಿಡುಗಡೆ ; ಸಂಪೂರ್ಣ ವಿವರ ಇಲ್ಲಿದೆ.!

ಎಂದಿನಿಂದ ಹೆಚ್ಚಳ.?   

ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಶನಿವಾರ (ಜೂನ್ 15) ಮಧ್ಯಾಹ್ನ ಹೊರಡಿಸಿರುವ ಸುತ್ತೋಲೆಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ದರ 99.84 ರೂ. ಆಗಿದ್ದು, ಡೀಸೆಲ್‌ ದರ ಲೀಟರ್‌ಗೆ 85.93 ರೂ. ಆಗಿದೆ.

ಇದೀಗ ತೆರಿಗೆ ಹೆಚ್ಚಳದ ಬಳಿಕ ಪೆಟ್ರೋಲ್‌ ದರ ಲೀಟರ್‌ಗೆ 102.84 ರೂ. ಆಗಲಿದೆ. ಡೀಸೆಲ್‌ ದರ ಲೀಟರ್‌ಗೆ 89.43 ರೂ. ಆಗಲಿದೆ. ಸಾಗಾಟ ವೆಚ್ಚಕ್ಕನುಗುಣವಾಗಿ ದರ ವ್ಯತ್ಯಾಸವಾಗುವುದರಿಂದ ವಿವಿಧ ಜಿಲ್ಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.   

ಇದನ್ನು ಓದಿ : HPCL : ಹಿಂದುಸ್ತಾನ್‌ ಪೆಟ್ರೋಲಿಯಮ್ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸರ್ಕಾರ ಈಗಾಗಲೇ ಮದ್ಯ ಮಾರಾಟದ ಮೇಲೆ ತೆರಿಗೆ ಹೆಚ್ಚಳ ಮಾಡಿದೆ. ವಾಹನ, ರಸ್ತೆ ತೆರಿಗೆ ಹೆಚ್ಚಳದ ಆಯ್ಕೆಯೂ ಸರ್ಕಾರದ ಮುಂದಿಲ್ಲ. ಹೀಗಾಗಿ ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ಚಿಲ್ಲರೆ ಮಾರಾಟದ ಮೇಲಿನ ತೆರಿಗೆ ಹೆಚ್ಚಳದ ಮೂಲಕ ಬೊಕ್ಕಸ ತುಂಬಿಸಲು ಮುಂದಾಗಿದೆ.

spot_img
spot_img
- Advertisment -spot_img