Thursday, June 20, 2024
spot_img
spot_img
spot_img
spot_img
spot_img
spot_img

Belagavi : ಬಾಯ್ಲರ್ ಸ್ಪೋಟ ; ಮಹಿಳೆ ಸಾವು, ಇಬ್ಬರು ಗಂಭೀರ.!

spot_img

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿಯ ಪ್ರಿಯಾ ಎಕ್ಸ್ ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಒಬ್ಬರು ಮೃತಪಟ್ಟಿದ್ದು, ಇತರ ಇಬ್ಬರು ಸ್ಥಿತಿ ಗಂಭೀರವಾಘಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಮಂಗಳವಾರ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯಗಳಾಗಿದ್ದವು.

ಇದನ್ನು ಓದಿ : ತುಂಬಾ ಸಂತೋಷವಾದಾಗ ಹೀಗೂ ಸೆಲೆಬ್ರೇಷನ್ ಮಾಡ್ತಾರಾ.? Videio ನೋಡಿ.!

ಇನ್ನು ಈ ದುರ್ಘಟನೆಯಲ್ಲಿ ಗಾಯಗೊಂಡ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಿಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೆಕ್ಕೆಜೋಳ ಪಾಲಿಶ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆ ಇದಾಗಿದ್ದು ಅತಿ ಹೆಚ್ಚಳ ಒತ್ತಡದಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನು ಓದಿ : ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

ಅಗ್ನಿ ಶಾಮಕ ಸಿಬ್ಬಂದಿ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

spot_img
spot_img
- Advertisment -spot_img