ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ (Munavalli of Savadatti Taluk) ಸಮೀಪ ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.
ಮೃತ ಬಾಲಕರು ಸಚೀನ ಕಟ್ಟಿಮನಿ (14), ವೀರೇಶ ಕಟ್ಟಿಮನಿ (13) ಎಂದು ತಿಳಿದು ಬಂದಿದೆ. ಇನ್ನೂ ಇಬ್ಬರು ಬಾಲಕರು ಗದಗ ಜಿಲ್ಲೆಯವರು ಎನ್ನಲಾಗಿದೆ.
ಇದನ್ನು ಓದಿ : WCD : ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಬಂದಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು (Two boys from the same family) ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿಕೊಂಡು (After the fair) ಊರಿಗೆ ಮರಳುತ್ತಿದ್ದ ವೇಳೆ ಕುಟುಂಬದ ಸದಸ್ಯರು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾರೆ. ಈ ವೇಳೆ ನದಿಯ ಆಳಕ್ಕೆ ಇಳಿದಿದ್ದ ಬಾಲಕರಿಗೆ ಈಜು ಬಾರದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : ಟ್ರೈನ್‌ನಲ್ಲಿ ಬೆಂಕಿ ವದಂತಿ : ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು 10 ಜನರ ಸಾ*ವು ; ವಿಡಿಯೋ.!
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಓರ್ವ ಬಾಲಕನ ಮೃತದೇಹ ಹೊರತೆಗೆದಿದ್ದು, ಇನ್ನೊಬ್ಬ ಬಾಲಕನ ಮೃತದೇಹದ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಸವದತ್ತಿ ಪೊಲೀಸ್ ಠಾಣೆ CPI ಧರ್ಮಾಕರ್ ಧರ್ಮಟ್ಟಿ ಮತ್ತು ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.