Sunday, December 22, 2024
HomeNewsBreaking news : ತಕ್ಷಣವೇ C.T. ರವಿ ಬಿಡುಗಡೆಗೆ ಕೋರ್ಟ್ ಆದೇಶ.!
spot_img

Breaking news : ತಕ್ಷಣವೇ C.T. ರವಿ ಬಿಡುಗಡೆಗೆ ಕೋರ್ಟ್ ಆದೇಶ.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು, ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರನ್ನು ಅರೆಸ್ಟ್ ಮಾಡಲಾಗಿದೆ.

ಇಂದು ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರನ್ನು ಪೊಲೀಸರು JMFC ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಹಾಜರುಪಡಿಸಿದರು.

ವಕೀಲ ಎಂ ಬಿ ಜಿರಲಿ ಅವರು ಸಿ ಟಿ ರವಿ ಪರವಾಗಿ ವಾದ ಮಂಡಿಸಿದರು. ಈ ವೇಳೆ ರಾತ್ರಿ ಏನೆಲ್ಲಾ ನಡೆಯಿತು ಎಂದು ಸಿ ಟಿ ರವಿ ವಿವರಿಸಿದರು. ಪೊಲೀಸರ ವಿರುದ್ಧ ಆರೋಪಗಳ ಸುರಿಮಳೆಗೈದರು.

ಇದಾದ ನಂತರ C T ರವಿ ಅವರ ಜಾಮೀನು ಆದೇಶ ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶರು ಮುಂದೂಡಿದರು.

ಮಧ್ಯಾಹ್ನದ ಹೊತ್ತಿಗೆ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು, ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿದೆ.

ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿ.ಟಿ ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಕರೆತರಲಾಗುತ್ತಿದೆ.

ಈ ಬೆನ್ನಲ್ಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ಕೋರ್ಟ್ ನಲ್ಲಿ ಸಿ.ಟಿ ರವಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಆರಂಭಿಸಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದ್ದರೆ, ಸಿ.ಟಿ ರವಿ ಪರವಾಗಿ ಅಶೋಕ್ ಹಾರನಹಳ್ಳಿ ಪ್ರತಿವಾದ ಮಂಡಿಸಿದರು ಎಂದು ತಿಳಿದು ಬಂದಿದೆ.

ವಾದ ಪ್ರತಿ ವಾದಗಳನ್ನು ಆಲಿಸಿದ ನ್ಯಾಯಾಲಯವು, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments