Friday, July 11, 2025

Janaspandhan News

HomeGeneral NewsRiver bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!
spot_img
spot_img

River bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!

- Advertisement -

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಗುಜರಾತ್‌ನ ಮಹಿಸಾಗರ್ ನದಿಗೆ ನಿರ್ಮಿಸಲಾದ ಹಳೆಯ ಸೇತುವೆ (bridge) ಕುಸಿದು ಭೀಕರ ದುರಂತ ಸಂಭವಿಸಿದ್ದು, ಈ ಅಪಘಾತದಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ ಹಾಗೂ ಐವರು ರಕ್ಷಣೆಗೊಂಡಿದ್ದಾರೆ ಎಂದು ವರದಿಯಾಗಿದೆ.

1981ರಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ (bridge) 1985ರಲ್ಲಿ ಸಾರ್ವಜನಿಕ ಸಂಚಾರಕ್ಕೆ ತೆರೆದುಕೊಂಡಿತ್ತು. ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಪ್ರದೇಶಗಳನ್ನು ಸಂಪರ್ಕಿಸುವ ಈ ಪ್ರಮುಖ ಸೇತುವೆ (bridge) ಯ ಸ್ಲ್ಯಾಬ್ ಮುರಿದು ಹೋಗಿದ್ದು, ಐದು ವಾಹನಗಳು ಸೇರಿದಂತೆ ಎರಡು ಟ್ರಕ್‌ಗಳು ಸಂಪೂರ್ಣ ನದಿಗಯಲ್ಲಿ ಮುಳುಗಿವೆ. ಒಂದು ಟ್ಯಾಂಕರ್ ಸೇತುವೆ ಮೇಲೆ ಅರ್ಧದಷ್ಟು ನೇತಾಡುವ ಸ್ಥಿತಿಯಲ್ಲಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ಪ್ರತಿಕ್ರಿಯೆ :

“ಘಟನೆಯಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದು, ಐವರು ಬದುಕುಳಿದಿದ್ದಾರೆ. ರಕ್ಷಣಾ ಕಾರ್ಯ ತಕ್ಷಣ ಆರಂಭವಾಗಿದ್ದು, ದುರಂತಕ್ಕಿಡಾದ ಸೇತುವೆ ನಿರ್ವಹಣೆಯು ಕಾಲಕಾಲಕ್ಕೆ ಆಗುತ್ತಿದ್ದರೂ ಈ ಘಟನೆ ಸಂಭವಿಸಿದೆ. ತನಿಖೆಯ ಮೂಲಕ ನಿಖರ ಕಾರಣವನ್ನು ಹೊರತೆಗೆದುಕೊಳ್ಳಲಾಗುವುದು,” ಎಂದಿದ್ದಾರೆ.

ನಿರ್ಲಕ್ಷ್ಯಕ್ಕೆ ಸೇತುವೆ (bridge) ಬಲಿಯಾಗಿದೆಯೇ.?

ರಸ್ತೆ ಮತ್ತು ಕಟ್ಟಡಗಳ ಇಲಾಖೆಯ ಕಾರ್ಯದರ್ಶಿ ಪಿ.ಆರ್. ಪಟೇಲಿಯಾ, “ಸೇತುವೆ (bridge) ಗಂಭೀರ ಹಾನಿಗೆ ಒಳಗಾಗಿದ್ದರಿಂದ ಈ ಅಪಘಾತ ಸಂಭವಿಸಿದೆ. ತಜ್ಞರ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಈಜುಗಾರರು ಶವಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿದ್ದಾರೆ,” ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಎಚ್ಚರಿಕೆ ನೀಡಲಾಗಿತ್ತು!

ಸ್ಥಳೀಯ ಶಾಸಕ ಚೈತನ್ಯ ಸಿಂಗ್ ಝಾಲಾ, ಈ ಸೇತುವೆಯ ಶಿಥಿಲ ಸ್ಥಿತಿಯ ಬಗ್ಗೆ ಸರ್ಕಾರಕ್ಕೆ ಈ ಹಿಂದೆ ಎಚ್ಚರಿಕೆ ನೀಡಿದ್ದರೂ, ಸೇತುವೆ (bridge) ಮೇಲೆ ಸಂಚಾರವನ್ನು ನಿಲ್ಲಿಸದಿರುವ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಸೇತುವೆ ನಿರ್ಮಾಣಕ್ಕೆ ಅನುಮೋದನೆ :

ಸರ್ಕಾರ ಈಗ ರೂ.212 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ (bridge) ನಿರ್ಮಾಣಕ್ಕೆ ಅನುಮೋದನೆ ನೀಡಿದ್ದು, ಸಮೀಕ್ಷೆಯು ಈಗಾಗಲೇ ಪೂರ್ಣಗೊಂಡಿದೆ.

CM ನಿರ್ದೇಶನ: ತಜ್ಞರ ತನಿಖೆಗೆ ಆದೇಶ :

ಮುಖ್ಯಮಂತ್ರಿಗಳ ಸೂಚನೆಯಂತೆ ತಾಂತ್ರಿಕ ತಜ್ಞರ ತಂಡಕ್ಕೆ ತನಿಖೆ ಹಸ್ತಾಂತರಿಸಲಾಗಿದೆ. ಈ ಘಟನೆಯು ಹಳೆಯ ಮೂಲಸೌಕರ್ಯದ ನಿರ್ವಹಣೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಸಕಾಲಿಕ ಕ್ರಮಗಳಿದ್ದರೆ ದುರಂತ ತಪ್ಪಿಸಬಹುದಿತ್ತು ಎಂಬ ಚರ್ಚೆ ಸಾಮಾಜಿಕ ಮಟ್ಟದಲ್ಲಿ ನಡೆಯುತ್ತಿದೆ.

ವಿಡಿಯೋ :

Astrology : ಹೇಗಿದೆ ಗೊತ್ತಾ.? ಜುಲೈ 08 ರ ದ್ವಾದಶ ರಾಶಿಗಳ ಫಲಾಫಲ.!

Astrology

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 08 ರ ಮಂಗಳವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ :  Petrol worth Rs.120 : ಕೈ ಮಾಡಿದ ಪಿಎಸ್‌ಐ : ಮರಳಿ ಕೊಟ್ಟ ಸಿಬ್ಬಂದಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಆರ್ಥಿಕವಾಗಿ ಗೊಂದಲಮಯ ಪರಿಸ್ಥಿತಿಗಳು ಉಂಟಾಗುತ್ತದೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರ ವರ್ತನೆ ನಿರಾಶಾದಾಯಕವಾಗಿರುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ವೃಷಭ ರಾಶಿ*

ಪಾಲುದಾರರೊಂದಿಗೆ ಭಿನ್ನಭಿಪ್ರಾಯಗಳು ಇರುತ್ತವೆ. ಬಾಲ್ಯದ ಸ್ನೇಹಿತರೊಂದಿಗೆ ನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಕೆಲಸದ ಹೊರೆ ಹೆಚ್ಚಾಗುತ್ತವೆ. ಹಣಕಾಸಿನ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಉತ್ತಮ.

*ಮಿಥುನ ರಾಶಿ*

ಬಾಲ್ಯದ ಸ್ನೇಹಿತರಿಂದ ನೀವು ಆಸಕ್ತಿದಾಯಕ ಮಾಹಿತಿಯನ್ನು ಸ್ವೀಕರಿಸುತ್ತೀರಿ. ಅಗತ್ಯಕ್ಕೆ ಹಣ ದೊರೆಯುತ್ತದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಬಂಧು ಮಿತ್ರರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕಟಕ ರಾಶಿ*

ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ದೂರ ಪ್ರಯಾಣಗಳು ಶ್ರಮದಾಯಕವಾಗಿರುತ್ತವೆ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ. ಒಂದು ಪ್ರಮುಖ ವಿಷಯದಲ್ಲಿ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ.

ಇದನ್ನು ಓದಿ : Fake SI : 2 ವರ್ಷಗಳಿಂದ ಅಸಲಿ ಪೊಲೀಸರನ್ನೇ ಯಾಮಾರಿಸಿದ್ದ ನಕಲಿ SI.!
*ಸಿಂಹ ರಾಶಿ*

ಪ್ರೀತಿಪಾತ್ರರಿಂದ ಅಪರೂಪದ ಆಹ್ವಾನಗಳನ್ನು ಸ್ವೀಕರಿಸುತ್ತೀರಿ . ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ ಮತ್ತು ಆರ್ಥಿಕ ಲಾಭ ದೊರೆಯುತ್ತದೆ. ವೃತ್ತಿಪರ ವ್ಯವಹಾರದಲ್ಲಿ, ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.

*ಕನ್ಯಾ ರಾಶಿ*

ಹಳೆ ಸಾಲದ ಒತ್ತಡದದಿಂದ ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕೌಟುಂಬಿಕ ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಹೊಸ ವ್ಯಾಪಾರ ಹೂಡಿಕೆ ಮಾಡುವ ಪ್ರಯತ್ನಗಳು ನಿಧಾನವಾಗುತ್ತವೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

*ತುಲಾ ರಾಶಿ*

ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಸಹೋದರರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ನಿರುದ್ಯೋಗಿಗಳು ತಮ್ಮ ಪ್ರಯತ್ನದ ಫಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ, ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗ ವಾತಾವರಣವು ಅನುಕೂಲಕರವಾಗಿರುತ್ತದೆ. ಹಣದ ಆದಾಯ ಉತ್ತಮವಾಗಿರುತ್ತದೆ.

*ವೃಶ್ಚಿಕ ರಾಶಿ*

ದೀರ್ಘಾವಧಿ ಸಾಲಗಳಿಂದ ಪರಿಹಾರ ದೊರೆಯುತ್ತದೆ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಹಣಕಾಸಿನ ವಿಷಯಗಳು ಕೂಡಿ ಬರುತ್ತವೆ. ಹೊಸ ವಸ್ತ್ರ ಖರೀದಿಸಲಾಗುತ್ತದೆ. ಹಳೆಯ ಸ್ನೇಹಿತರನ್ನು ಭೇಟಿಯಾಗುವುದು ಸಂತೋಷವನ್ನು ತರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ.

ಇದನ್ನು ಓದಿ : PSI : ಲಾಡ್ಜ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ PSI.!
*ಧನುಸ್ಸು ರಾಶಿ*

ಕೈಗೆತ್ತಿಕೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಅಲ್ಪ ಫಲವನ್ನು ಪಡೆಯುತ್ತೀರಿ. ಸಹೋದರರೊಂದಿಗೆ ವಿವಾದವಿರುತ್ತದೆ. ದೀರ್ಘಾವಧಿ ಸಾಲಗಳ ಒತ್ತಡ ಹೆಚ್ಚಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಹಿರಿಯರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಉದ್ಯೋಗದ ವಾತಾವರಣ ಸ್ವಲ್ಪ ಕಿರಿಕಿರಿ ಉಂಟಾಗುತ್ತದೆ, ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವುದು ಒಳ್ಳೆಯದು.

*ಮಕರ ರಾಶಿ*

ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ನಿರುದ್ಯೋಗಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವ್ಯಾಪಾರ ವ್ಯವಹಾರಗಳಲ್ಲಿ ವಿಚಾರಗಳು ಕೂಡಿ ಬರುವುದಿಲ್ಲ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

*ಕುಂಭ ರಾಶಿ*

ಹೊಸ ವಸ್ತು ಮತ್ತು ವಾಹನಗಳನ್ನು ಖರೀದಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳಲಿವೆ. ಸಹೋದರರಿಂದ ಶುಭ ಆಹ್ವಾನಗಳು ಬರುತ್ತವೆ. ಬಾಲ್ಯದ ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುತ್ತೀರಿ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳೊಂದಿಗೆ ಸಾಮರಸ್ಯವಿರುತ್ತದೆ.

*ಮೀನ ರಾಶಿ*

ಮನೆಯಲ್ಲಿ ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತೀರಿ , ರಾಜಕೀಯ ವರ್ಗದವರಿಗೆ ಬಡ್ತಿ ಹೆಚ್ಚಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ದೂರದ ಸಂಬಂಧಿಕರೊಂದಿಗೆ ಹಳೆಯ ವಿಷಯಗಳನ್ನು ಚರ್ಚಿಸಲಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭ ಗಳಿಸುತ್ತೀರಿ. ಮನೆಯಲ್ಲಿ ಶುಭ ಕಾರ್ಯ ಪ್ರಯತ್ನಗಳು ಫಲ ನೀಡುತ್ತವೆ.

- Advertisement -
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments