Friday, June 14, 2024
spot_img
spot_img
spot_img
spot_img
spot_img
spot_img

Crime : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.!

spot_img

ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ‌ಬೆಳ್ತಂಗಡಿ (Beltangady) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಿಸಿದ ಘಟನೆ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸಹಿತ ಮೂವರನ್ನು ಬಂಧಿಸಲಾಗಿದೆ (arrested) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಕುಡಿದ ಮತ್ತಲ್ಲಿ ನಿಂದಿಸಿದ ಆರೋಪ ; ನಟಿ ರವೀನಾ ಟಂಡನ್ ಮೇಲೆ ಹಲ್ಲೆಗೆ ಮುಂದಾದ ಜನ ; Video viral.!

ಮೂಡುಬಿದಿರೆ ನಿವಾಸಿಗಳಾದ ಫಾರೂಕ್(19), ಮಹಮ್ಮದ್ ಇಕ್ಸಾಲ್ (26) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕನನ್ನು ಮಂಗಳೂರು ಬಾಲ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ಮಂಗಳೂರು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ.

ಇನ್ನೂ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ (Judicial custody ) ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಮೂವರು ಸೇರಿ ಒತ್ತಾಯಪೂರ್ವಕವಾಗಿ ಅತ್ಯಾಚಾರವೆಸಗಿದ್ದು, ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ (pregnant).

ಇದನ್ನು ಓದಿ : ಬೇರೊಬ್ಬಳೊಂದಿಗಿದ್ದ ಪತಿಯನ್ನು ರೆಡ್ ಹ್ಯಾಂಡ್ಆಗಿ ಹಿಡಿದು ಕಪಾಳಮೋಕ್ಷ ಮಾಡಿದ ಪತ್ನಿ ; Video ನೋಡಿ.!

ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸಂತ್ರಸ್ತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೇ 31ರಂದು ನೀಡಿದ್ದಾಳೆ.

ಆ ದೂರಿನನ್ವಯ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೊಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

spot_img
spot_img
- Advertisment -spot_img