Wednesday, May 22, 2024
spot_img
spot_img
spot_img
spot_img
spot_img
spot_img

Lokasabha election : ಕಾಂಗ್ರೆಸ್‌ಗೆ ಬಿಗ್ ಶಾಕ್ ; ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದ ಕೈ ಅಭ್ಯರ್ಥಿ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಇಂದೋರ್ ಲೋಕಸಭಾ (Lok Sabha Election 2024) ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ (Akshay Kanti Bam) ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಲ್ಲದೇ ‘ಪಕ್ಷಕ್ಕೆ ಸ್ವಾಗತ’ ಎಂದು ಅಕ್ಷಯ್ ಕಾಂತಿ ಬಾಮ್ ಅವರ ಜತೆಗಿನ ಫೋಟೋವೊಂದನ್ನು ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ (share).

ಇದನ್ನು ಓದಿ : ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ಪೋಸ್ಟ್‌ನಲ್ಲಿ ಅವರು, ‘ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಡಾ. ಮೋಹನ್ ಯಾದವ್, ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ ನೇತೃತ್ವದಲ್ಲಿ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ’ ಎಂದು ಅವರು ಬರೆದಿದ್ದಾರೆ.

ಇನ್ನೂ ಇಂದೋರ್ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 25 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿತ್ತು. ಏಪ್ರಿಲ್ 29 ಅಂದರೆ ಇಂದು ನಾಮಪತ್ರ ಹಿಂಪಡೆಯಲು (to withdraw) ಕೊನೆಯ ದಿನ.

ಆದರೆ ಕಾಂಗ್ರೆಸ್‌ಗೆ ಯಾವುದೇ ಸುಳಿವು ಸಿಗದಂತೆ ಗೌಪ್ಯವಾಗಿ (confidentially) ಕೈಲಾಶ್ ವಿಜಯವರ್ಗಿಯ ಆಪರೇಷನ್ ಕಮಲ ಮಾಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರ ಜೊತೆ ಗೌಪ್ಯವಾಗಿ ಮಾತನಾಡಿ ಪಕ್ಷಕ್ಕೆ ಸೆಳೆದಿದ್ದಾರೆ.

ಇದನ್ನು ಓದಿ : Video : ಸೇತುವೆಯಿಂದ 20 ಅಡಿ ಕೆಳಗೆ ಬಿದ್ದು ಛಿದ್ರ ಛಿದ್ರವಾದ ಕಾರು ; ಮೂವರು ಭಾರತೀಯ ಯುವತಿಯರ ಸಾ*ವು ; ಓರ್ವ ಗಂಭೀರ.!

ನಾಮಪತ್ರ ಸಲ್ಲಿಕೆಗೆ ಇದ್ದ ಕೊನೆಯ ದಿನದ ನಂತರವೇ ಬಿಜೆಪಿ ಸೇರುವುದರ ಮೂಲಕ ಕಾಂಗ್ರೆಸ್‌ಗೆ ಮತ್ತೊಂದು ಅಭ್ಯರ್ಥಿಯನ್ನು ಹಾಕಲಾಗದ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದ್ದಾರೆ ಎನ್ನಲಾಗಿದೆ.

spot_img
spot_img
spot_img
- Advertisment -spot_img