ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಹತ್ತು ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಅದರಲ್ಲಿ ಕೆಲವೊಂದು ಒಳ್ಳೆಯ ಸಂದೇಶ ನೀಡಿದರೆ ಕೆಲವೊಂದು ಕೆಟ್ಟ ಪರಿಣಾಮಗಳನ್ನು ಬೀರುತ್ತವೆ. ಕೆಲವೊಂದು ತಮಾಷೆಯಾಗಿದ್ರೆ, ಮತ್ತೆ ಕೆಲವು ಭಯ ಹುಟ್ಟಿಸುತ್ತವೆ.
ಸದ್ಯ ಭಯ ಹುಟ್ಟಿಸುವ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನು ಓದಿ : ಶಾಲೆಯಲ್ಲಿ ವಿಡಿಯೋ ಮಾಡುತ್ತಿದ್ದ ಶಿಕ್ಷಕಿ ; ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ, ಹೊಡೆದಾಟದ ವಿಡಿಯೋ Viral.!
ಬಿಜ್ನೋರ್ನ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ವೈರಲ್ ವಿಡಿಯೋದಲ್ಲಿರುವ ದೃಶ್ಯ :
ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಲೆಟ್ ಬೈಕ್ನಲ್ಲಿ ಕುಳಿತುಕೊಂಡು ಇಬ್ಬರು ಯುವಕರು ರೀಲ್ಸ್ ಮಾಡುತ್ತ ತೆರಳುತ್ತಿದ್ದಾರೆ. ಈ ವೇಳೆ ಬೈಕ್ ಚಲಾಯಿಸುತ್ತಿರುವ ಯುವಕ ಏಕಾಏಕಿ ಗಾಡಿಯನ್ನು ಬಲಕ್ಕೆ ಟರ್ನ್ ಮಾಡಿದ್ದಾನೆ.
ಈ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಮುಂದಕ್ಕೆ ಸಾಗಿದೆ. ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ರಸ್ತೆಯ ಮತ್ತೊಂದು ಬದಿಗೆ ಹಾರಿ ಬಿದ್ದಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಇದನ್ನು ಓದಿ : ವಿದ್ಯಾರ್ಥಿ ಜೊತೆ ಶಿಕ್ಷಕಿಯ love; ಮುಂದೆ ನಡೆದದ್ದು ಊಹೆಗೂ ನಿಲುಕದ್ದು.!
ಗಾಯಾಳುಗಳಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ರೀಲ್ಸ್ ಮಾಡುವ ವೇಳೆ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಅಪಘಾತ ಮಾಡಿದ ಕಾರಿನ ಹುಡುಕಾಟದಲ್ಲಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
UTTARPRADESH | @bijnorpolice दिल्ली-पौड़ी नेशनल हाईवे पर ड्रोन कैमरे से रील्स बनाते समय दो युवक सड़क हादसे का शिकार हो गए। इस हादसे का लाइव वीडियो सोशल मीडिया पर वायरल हो गया है। दोनों युवकों को गंभीर चोटें आई हैं, लेकिन उनकी जान बच गई है। यह घटना एक महत्वपूर्ण संदेश देती है कि… pic.twitter.com/AQpMifpQpf
— ℝ𝕒𝕛 𝕄𝕒𝕛𝕚 (@Rajmajiofficial) August 14, 2024