Sunday, September 15, 2024
spot_img
spot_img
spot_img
spot_img
spot_img
spot_img
spot_img

ಉಚಿತ ಹೊಲಿಗೆ ಯಂತ್ರ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ; ಇಲ್ಲಿದೆ ಡೈರೆಕ್ಟ್ link.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಮನೆಯಿಂದ ಹೊರಗೆ ಬಂದು ಕೆಲಸ ಮಾಡಲು ಸಾಧ್ಯವಾಗದ ಮಹಿಳೆಯರು ಮನೆಯಲ್ಲೇ ದುಡಿಮೆ ಮಾಡಲು ಮುಂದಾಗ್ತಾರೆ. ಮಹಿಳೆಯರು ಮಾಡಬಹುದಾದ ಅತ್ಯುತ್ತಮ ಕೆಲಸಗಳಲ್ಲಿ ಹೊಲಿಗೆ ಒಂದು. ಎಂದೂ ಬೇಡಿಕೆ ಕಡಿಮೆಯಾಗದ ಉದ್ಯೋಗ ಇದು.

ಹೀಗಾಗಿ ಸರ್ಕಾರವೇ ಬಡ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಕೊಡುವ ಕೆಲಸ ಮಾಡ್ತಿದೆ. ಸ್ಟಿಚ್ಚಿಂಗ್ ಬರುತ್ತೆ ಆದ್ರೆ ಹೊಲಿಗೆ ಮಶಿನ್ ಮನೆಯಲ್ಲಿಲ್ಲ ಎನ್ನುವವರು ಇಂದೇ ಸರ್ಕಾರಿ ಯೋಜನೆ ಲಾಭ ಪಡೆಯಬಹುದು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು (Free Sewing Machine Scheme) ಪ್ರಾರಂಭಿಸಿದ್ದು, ಅದು ಈಗಲೂ ಚಾಲ್ತಿಯಲ್ಲಿದೆ.

ಇದನ್ನು ಓದಿ : Special news : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ಮಬಾರದು ಏಕೆ.? ಇಲ್ಲಿದೆ ವೈಜ್ಞಾನಿಕ ಕಾರಣ.

ಪ್ರತಿ ರಾಜ್ಯದಲ್ಲಿ 50,000ಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು. ಸರ್ಕಾರ ನಡೆಸುತ್ತಿರುವ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು.

ಪ್ರಸ್ತುತ ಉಚಿತ ಹೊಲಿಗೆ ಯಂತ್ರ ಯೋಜನೆಯು ಗುಜರಾತ್, ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶದಂತಹ ಕೆಲವೇ ರಾಜ್ಯದಲ್ಲಿ ಜಾರಿಯಲ್ಲಿದೆ. ಶೀಘ್ರದಲ್ಲೇ ಎಲ್ಲ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ತರುವ ಪ್ಲಾನ್ ನಲ್ಲಿ ಕೇಂದ್ರ ಸರ್ಕಾರವಿದೆ. ಈ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರ ಪಡೆಯಲು 15000 ರೂಪಾಯಿ ಸಿಗುತ್ತದೆ. ಅದ್ರಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಖರೀದಿಸಿ ಮಹಿಳೆಯರು ಕೆಲಸ ಶುರು ಮಾಡಬಹುದು.

ಇದನ್ನು ಓದಿ : Cinema : ಹಾಟ್ ಪೋಟೋ ಶೇರ್ ಮಾಡಿ ಪಡ್ಡೆ ಹೈಕ್ಳ ನಿದ್ದೆಗೆಡಿಸಿದ ನಟಿ ಜ್ಯೋತಿ ರೈ.!

ಕೇಂದ್ರ ಸರ್ಕಾರದ ಈ ಉಚಿತ ಹೊಲಿಗೆ ಯಂತ್ರ ಯೋಜನೆ ಲಾಭವನ್ನು ಕರ್ನಾಟಕದ ಮಹಿಳೆಯರು ಕೂಡ ಪಡೆಯಬಹುದು. ಕೆಳಗೆ ನೀಡಿರುವ ಮಾಹಿತಿಯ ಪ್ರಕಾರ ನೀವು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಉಚಿತ ಹೊಲಿಗೆ ಯಂತ್ರ ಯೋಜನೆಯಡಿ, 20 ವರ್ಷದಿಂದ 40 ವರ್ಷ ವಯಸ್ಸಿನ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಇದನ್ನು ಓದಿ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆಹ್ವಾನ.!

ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಪ್ರತಿ ಜಿಲ್ಲಾ ಪಂಚಾಯತಿ ವೆಬ್‌ಸೈಟ್ ನಲ್ಲಿ ಆನ್ ಲೈನ್ ಪೋರ್ಟಲ್ ಲಿಂಕ್ ನೀಡಲಾಗುತ್ತದೆ. ಅದನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು. ಕರ್ನಾಟಕದ ಕೆಲ ಜಿಲ್ಲೆಯಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವ ಅವಕಾಶವಿದೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆ :
* ಆಧಾರ್ ಕಾರ್ಡ್
* ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ
* ಪಾಸ್ ಪೋರ್ಟ್ ಗಾತ್ರದ ಫೋಟೋ
* ಮೊಬೈಲ್ ನಂಬರ್
* ಆದಾಯ ಪ್ರಮಾಣಪತ್ರ
* ಕಾರ್ಮಿಕ ಕಾರ್ಡ್
* ವಿಳಾಸ ಪುರಾವೆಯಾಗಿ ರೇಷನ್ ಕಾರ್ಡ್
* ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ನೀಡಬೇಕು.
* ವಿಧವೆಯಾದಲ್ಲಿ ವಿಧವಾ ಪ್ರಮಾಣ ಪತ್ರ, * ವಿಕಲಾಂಗರಾಗಿದ್ದರೆ ಅದರ ಪ್ರಮಾಣ ಪತ್ರ
* ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಿಂದ ದೃಡೀಕರಣ ಪತ್ರ

ಇನ್ನೂ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು, ಕೆಳಗೆ ನೀಡಲಾದ ಹಂತಗಳನ್ನು ಅನುಸರಿಸುವ ಮೂಲಕ ಉಚಿತ ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್‌ :
https://pmvishwakarma.gov.in/

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img