Saturday, July 27, 2024
spot_img
spot_img
spot_img
spot_img
spot_img
spot_img

UPSC : ಕೇಂದ್ರ ಲೋಕಸೇವಾ ಆಯೋಗದಿಂದ 506 ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌,  ನೌಕರಿ : ಕೇಂದ್ರ ಲೋಕಸೇವಾ ಆಯೋಗ (Union Public Service Commission) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್​ಲೈನ್ (Online)​ ಮೂಲಕ ಅರ್ಜಿ ಹಾಕಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾದ ಮಾಹಿತಿ : ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್‌ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : Health : ಒಂದು ತಿಂಗಳು ಅನ್ನ ಸೇವಿಸುವುದನ್ನು ಬಿಟ್ಟರೆ ಏನಾಗುವುದು.?

ಹುದ್ದೆಯ ಮಾಹಿತಿ :
* ಗಡಿ ಭದ್ರತಾ ಪಡೆ (BSF) : 186.
* ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) : 120.
* ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) : 100.
* ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ : (ITBP) : 58.
* ಸಶಸ್ತ್ರ ಸೀಮಾ ಬಲ (SSB) : 42.

ವಿದ್ಯಾರ್ಹತೆ :
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ :

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ :
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಇದನ್ನು ಓದಿ : ಈ ಜನಾಂಗದಲ್ಲಿ ಅಣ್ಣನನ್ನೇ ಮದ್ವೆ ಆಗ್ತಾಳೆ ತಂಗಿ ; ಇಲ್ಲಾಂದ್ರೆ ವಿಧಿಸ್ತಾರೆ ಕಠಿಣ ಶಿಕ್ಷೆ.!

ಅರ್ಜಿ ಶುಲ್ಕ :
* SC/ST/ಮಹಿಳಾ ಅಭ್ಯರ್ಥಿಗಳು  : ಇಲ್ಲ.
* ಸಾಮಾನ್ಯ/OBC/EWS ಅಭ್ಯರ್ಥಿಗಳು : ರೂ.200/-
* ಪಾವತಿ ವಿಧಾನ : ಆನ್‌ಲೈನ್

ಆಯ್ಕೆ ಪ್ರಕ್ರಿಯೆ :
* ಲಿಖಿತ ಪರೀಕ್ಷೆ.
* ದೈಹಿಕ ಮಾನದಂಡಗಳು/ದೈಹಿಕ ದಕ್ಷತೆ ಪರೀಕ್ಷೆ.
* ವೈದ್ಯಕೀಯ ಪರೀಕ್ಷೆ.
* ಮೆರಿಟ್ ಲಿಸ್ಟ್​.
* ಸಂದರ್ಶನ.

ಉದ್ಯೋಗದ ಸ್ಥಳ :
* ಭಾರತದಲ್ಲಿ ಎಲ್ಲಿ ಬೇಕಾದರೂ.

ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 24/04/2024.
* ಅರ್ಜಿ ಸಲ್ಲಿಸಲು ಕೊನೆಯ ದಿನ : 14/05/2024.

ಇದನ್ನು ಓದಿ : ಪಬ್ಲಿಕ್‌ನಲ್ಲಿಯೇ ಜಾರಿತು ನಟಿಯ clothes ; ಮೂರು ಬಿಟ್ಟವರು ಊರಿಗೆ ದೊಡ್ಡವರೆಂದ ನೆಟ್ಟಿಗರು.!

ಅರ್ಜಿ ಹಾಕೋದು ಹೇಗೆ :
* ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
- Advertisment -spot_img