ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ವರ್ಷಗಳಲ್ಲಿ ಅಕ್ರಮ ಸಂಬಂಧಗಳು ಹೆಚ್ಚಾಗುತ್ತಿವೆ. ಕೆಲ ಜನರು ಮದುವೆ ಫಿಕ್ಸ್ ಆಗಿದ್ದರೂ ಅಥವಾ ಮದುವೆಯಾಗಿದ್ದರೂ ಬೇರೊಬ್ಬರ ಜೊತೆ ಅನೈತಿಕ ಸಂಬಂಧವನ್ನು (An immoral relationship) ಹೊಂದಿರುತ್ತಾರೆ. ಈ ಅಕ್ರಮ ಸಂಬಂಧದ ಕಾರಣದಿಂದಾಗಿ ಸುಂದರ ಸಂಸಾರಗಳು (Beautiful families) ಮುರಿದು ಬೀಳುತ್ತವೆ.
ಕೆಲವರಂತೂ ತಮ್ಮ ಪತ್ನಿ ಅಥವಾ ಪತಿಯ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದು ಪಡಬಾರದ ಪಜೀತಿ ಪಡುತ್ತಾರೆ. ಸದ್ಯ ಲೇಡಿ ಕಾನ್ಸ್ಟೆಬಲ್ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಸಬ್ ಇನ್ಸ್ಪೆಕ್ಟರ್, ಪತ್ನಿಯ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದ ನಲ್ಗೊಂಡದಲ್ಲಿ (Nalgonda, Telangana) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಎಸ್ಐ- ಕಾನ್ಸ್ಟೆಬಲ್ ನಡುವಿನ ಲವ್ವಿಡವ್ವಿ ಆಡಿಯೋ ವೈರಲ್ (Lovidovvy audio between SI- Constable goes viral) ಆಗಿದ್ದು, ಪೊಲೀಸ್ ಇಲಾಖೆಯಲ್ಲಿ ಕೋಲಾಹಲ ಸೃಷ್ಟಿಸಿದೆ.
ಇದನ್ನು ಓದಿ : Accused of conversion : ಮರಕ್ಕೆ ಕಟ್ಟಿ ಹಾಕಿ ಮಹಿಳೆಯರಿಗೆ ಥಳಿತ.!
ಸಬ್ ಇನ್ಸ್ಪೆಕ್ಟರ್ ಮಹೇಂದರ್ ನಲ್ಗೊಂಡ ಜಿಲ್ಲೆಯ ಟಾಸ್ಕ್ ಫೋರ್ಸ್‌ನಲ್ಲಿ (task force) ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಹಲವು ವರ್ಷಗಳಿಂದ ಅಬಕಾರಿ ಕಾನ್ಸ್ಟೆಬಲ್ (Lady Excise Constable) ವಸಂತ ಎಂಬುವವರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಈ ವಿಷಯ ಸಬ್ ಇನ್ಸ್ಪೆಕ್ಟರ್ ಮಹೇಂದರ್ ಪತ್ನಿ, ಜ್ಯೋತಿ ಮಹೇಂದರ್ ಗೆ ಗೊತ್ತಾಗಿದ್ದು, ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಈ ವೇಳೆ ನನ್ನ ಗಂಡನ ತಂಟೆಗೆ ಬರಬೇಡ ಎಂದು ಕಾನ್ಸ್ಟೆಬಲ್ ವಸಂತಳಿಗೆ ಜ್ಯೋತಿ ವಾರ್ನಿಂಗ್ ಮಾಡಿದ್ದರು. ಆದರೆ, ಈ ಮಾತುಗಳಿಗೆ ತಲೆ ಕೆಡಿಸಿಕೊಳ್ಳದೇ ಇಬ್ಬರು ತಮ್ಮ ಸಂಬಂಧವನ್ನು ಮುಂದುವರಿಸಿದ್ದರು.
ಈ ನಡುವೆ ಇಬ್ಬರ ಕಾಲ್ ರೆಕಾರ್ಡಿಂಗ್ ಕೂಡ ವೈರಲ್ ಆಗಿದೆ. ಇನ್ನು ನಾನು ಸುಮ್ಮನಿದ್ದರೆ ಪ್ರಯೋಜನವಿಲ್ಲ ಎಂದು ಅರಿತ ಜ್ಯೋತಿ ತನ್ನ ಪತಿಯ ವಿರುದ್ಧ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ (Complained to higher officials) ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ : Special news : ಚಳಿಗಾಲದಲ್ಲಿ ನಿಮ್ಮ ಮುಖಕ್ಕೆ ಅಪ್ಪಿತಪ್ಪಿಯೂ ಇವುಗಳನ್ನು ಹಚ್ಚಿಕೊಳ್ಳಬೇಡಿ.!
ನನ್ನ ಗಂಡ ಮಹೇಂದರ್, ವಸಂತ ಎಂಬುವವರೊಂದಿಗೆ ಐದಾರು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದು, ಅಂದಿನಿಂದ ನನ್ನನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದೆ. ನನ್ನ ಗಂಡ ಸರ್ವೀಸ್ ರಿವಾಲ್ವರ್‌ನಿಂದ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದು, ಮಹೇಂದರ್ ಅವರನ್ನು ಸೇವೆಯಿಂದ ಶಾಶ್ವತವಾಗಿ ತೆಗೆದು ಹಾಕಿ, ಇಲ್ಲವಾದರೆ ನನಗೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ಅಳಲು ತೋಡಿಕೊಂಡರು ಎಂದು ವರದಿಯಿಂದ ತಿಳಿದು ಬಂದಿದೆ.
ಹಿಂದಿನ ಸುದ್ದಿ : ಮತಾಂತರದ ಆರೋಪ : ಮರಕ್ಕೆ ಕಟ್ಟಿ ಹಾಕಿ ಮಹಿಳೆಯರಿಗೆ ಥಳಿತ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಒಡಿಶಾದ ಬಾಲಸೋರ್ ಜಿಲ್ಲೆಯ (Balasore district of Odisha) ರೆಮುನಾ ಪ್ರದೇಶದಲ್ಲಿ ಧಾರ್ಮಿಕ ಮತಾಂತರದ (Religious conversion) ಶಂಕೆಯ ಮೇಲೆ ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬಳಿಕ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು (Separate cases) ದಾಖಲಿಸಿದ್ದಾರೆ.
ಇದನ್ನು ಓದಿ : ಸಂಚಲನ ಸೃಷ್ಟಿಸಿದ ಒಂದೇ ಕೆರೆಯಲ್ಲಿ PSI, ಲೇಡಿ ಕಾನ್ಸ್‌ಟೇಬಲ್ ಮತ್ತು ಓರ್ವ ಯುವಕನ ಶವ ಪತ್ತೆ ಪ್ರಕರಣ.!
ಖರಿಮುಖ ಗ್ರಾಮದ ಜನರ ಬಳಿ ಇಬ್ಬರು ಬುಡಕಟ್ಟು ಮಹಿಳೆಯರು (Tribal women) ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಿ ಎಂದು ಮನವೊಲಿಸಲು ಹೋಗಿದ್ದರು.
ಈ ವಿಚಾರ ಇಡೀ ಗ್ರಾಮದಲ್ಲಿ ಹಬ್ಬಿದ್ದು, ಹಿಂದೂ ಸಂಘಟನೆಯ ಸದಸ್ಯರು (Members of the Hindu organization) ಮತ್ತು ಸ್ಥಳೀಯರನ್ನು ಒಳಗೊಂಡ ಗುಂಪೊಂದು ಸ್ಥಳಕ್ಕೆ ಭೇಟಿ ನೀಡಿ ಇಬ್ಬರು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದೆ ಎಂದು ರೆಮುನಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ (ಒಐಸಿ) ಸುಭಾಷ್ ಚಂದ್ರ ಮಲ್ಲಿಕ್ TNIE ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.
ಮಹಿಳೆಯರ ಮುಖವನ್ನು ವಿರೂಪಗೊಳಿಸಿದ (Facial deformity) ಗುಂಪು, ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿದೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ನೀಲಗಿರಿ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಸ್ಥಳೀಯರನ್ನು ಮತಾಂತರಗೊಳಿಸಲು ಗ್ರಾಮಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ರೆಮುನಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ (Officer-in-charge of the police station) ಸುಭಾಷ್ ಚಂದ್ರ ಮಲ್ಲಿಕ್ ತಿಳಿಸಿದ್ದಾರೆ.
ದೂರು ಆಧರಿಸಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಮತ್ತು ಬಿಎನ್‌ಎಸ್‌ನ ವಿವಿಧ ವಿಭಾಗಗಳ ಅಡಿಯಲ್ಲಿ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.