ಜನಸ್ಪಂದನ ನ್ಯೂಸ್, ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದಲ್ಲಿರುವ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ (Cancel ineligible BPL card) ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಪಡಿತರದಾರರನ್ನು ಕೈ ಬಿಡುವ ಕುರಿತು ಆಹಾರ ನಾಗರಿಕ ಸರಬರಾಜು ಇಲಾಖೆ Department of Food Civil Supplies ಪ್ರಗತಿ ಪರಿಶೀಲನಾ ಸಭೆ (Progress review meeting) ನಡೆಯಿತು.
ಇದನ್ನು ಓದಿ : ಚೆನ್ನೈಯನ್ನು ಹಿಂದಿಕ್ಕಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದ Bangalore ; ಯಾವುದರಲ್ಲಿ ಗೊತ್ತಾ.?
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕಬೇಕು (BPL rationing should be phased out).
ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದಾಗಬಾರದು (BPL card of an eligible BPL cardholder should not be cancelled) ಎಂದು ಸೂಚನೆ ನೀಡಿದರು.
ಇದನ್ನು ಓದಿ : ಜಾತ್ರೆಯಲ್ಲಿ ರೊಚ್ಚಿಗೆದ್ದು ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದ ಆನೆ ; Shocking ವಿಡಿಯೋ ಇಲ್ಲಿದೆ.!
ಸ್ವಯಂ ತಮ್ಮ ಕಾರ್ಡ್‌ಗಳನ್ನು ಹಿಂತಿರುಗಿಸಲು ಅನರ್ಹ ಬಿಪಿಎಲ್ ಪಡಿತರದಾರರಿಗೆ ಕಾಲಾವಕಾಶ ನೀಡಬೇಕು.
ನಂತರ ಅಂತವರಿಗೆ ನೊಟೀಸ್ ನೀಡಿ ಕಾರ್ಡ್‌ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.